ಕೆರೆಗಳ ಮಾಲಿನ್ಯ: ಮರು ಪರಿಶೀಲನಾ ಅರ್ಜಿ ವಜಾ

7
ದಂಡ ರದ್ದತಿ ಕೋರಿದ್ದ ಅರ್ಜಿ

ಕೆರೆಗಳ ಮಾಲಿನ್ಯ: ಮರು ಪರಿಶೀಲನಾ ಅರ್ಜಿ ವಜಾ

Published:
Updated:

ನವದೆಹಲಿ: ಬೆಂಗಳೂರಿನ ಕೆರೆಗಳ ಮಾಲಿನ್ಯಕ್ಕೆ ಸಂಬಂಧಿಸಿದ ಪ್ರಕರಣದ ವಿಚಾರಣೆ ನಡೆಸಿ ಕಳೆದ ಡಿಸೆಂಬರ್‌ 6ರಂದು ನೀಡಿರುವ ತೀರ್ಪನ್ನು ಮರು ಪರಿಶೀಲಿಸುವಂತೆ ಕೋರಿ ರಾಜ್ಯ ಸರ್ಕಾರ ಸಲ್ಲಿಸಿದ್ದ ಮೇಲ್ಮನವಿಯನ್ನು ರಾಷ್ಟ್ರೀಯ ಹಸಿರು ನ್ಯಾಯಮಂಡಳಿ (ಎನ್‌ಜಿಟಿ) ತಿರಸ್ಕರಿಸಿದೆ.

ಬೆಳ್ಳಂದೂರು, ವರ್ತೂರು ಮತ್ತು ಅಗರ ಕೆರೆಗಳ ಮಾಲಿನ್ಯಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ, ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ)ಗಳಿಗೆ ವಿಧಿಸಿದ್ದ ₹ 7೫ ಕೋಟಿ ದಂಡ ರದ್ದುಪಡಿಸಬೇಕು. ಕೆರೆಗಳ ಪುನಶ್ಚೇತನ ಕಾರ್ಯಕ್ಕಾಗಿ ₹೫೦೦ ಕೋಟಿ ಮೀಸಲಿಡಬೇಕು ಎಂಬ ತೀರ್ಪಿನ ಮರು ಪರಿಶೀಲಿಸಬೇಕು ಎಂದು ಸರ್ಕಾರ ಕೋರಿತ್ತು.

ಕೆರೆಗಳು ಮತ್ತು ರಾಜ ಕಾಲುವೆಗಳ ರಕ್ಷಣೆಯಲ್ಲಿ ಸರ್ಕಾರ ವಿಫಲವಾಗಿದೆ ಎಂದು ಪರಿಶೀಲನೆಗೆ ನಿಯೋಜಿಸಿದ್ದ ಸಮಿತಿ ವರದಿ ಸಲ್ಲಿಸಿದೆ. ವರದಿಯನ್ನು ಆಧರಿಸಿ ತೀರ್ಪು ನೀಡಲಾಗಿದೆ ಎಂದು ನ್ಯಾಯಮೂರ್ತಿ ಆದರ್ಶಕುಮಾರ್ ಗೋಯಲ್ ನೇತೃತ್ವದ ಪೀಠ ತಿಳಿಸಿದೆ.

ದಂಡದ ಮೊತ್ತವನ್ನು ಕೇಂದ್ರ ಮತ್ತು ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಗಳಿಗೆ ಪಾವತಿಸಬೇಕು, ಕೆರೆಗಳ ಅಭಿವೃದ್ಧಿ ಕುರಿತ ಕಾರ್ಯಕ್ಷಮತೆಯ ಖಾತರಿ ಹಣವನ್ನಾಗಿ ₹ 100 ಕೋಟಿ ಪ್ರತ್ಯೇಕವಾಗಿ ಇರಿಸಬೇಕು ಎಂದು ಹಸಿರುಪೀಠ ತೀರ್ಪಿನಲ್ಲಿ ತಿಳಿಸಿತ್ತು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !