113ರಲ್ಲಿ 50 ಗೆಲ್ಲಲು ಕಾಂಗ್ರೆಸ್ ಪಣ

ಗುರುವಾರ , ಏಪ್ರಿಲ್ 25, 2019
29 °C

113ರಲ್ಲಿ 50 ಗೆಲ್ಲಲು ಕಾಂಗ್ರೆಸ್ ಪಣ

Published:
Updated:
Prajavani

ನವದೆಹಲಿ: ಮಧ್ಯಪ್ರದೇಶ, ರಾಜಸ್ಥಾನ, ಛತ್ತೀಸಗಡ ಮತ್ತು ಮಹಾರಾಷ್ಟ್ರದಲ್ಲಿ ಕನಿಷ್ಠ 50 ಕ್ಷೇತ್ರಗಳಲ್ಲಿ ಗೆಲವು ಸಾಧಿಸುವ ಗುರಿಯನ್ನು ಕಾಂಗ್ರೆಸ್ ಹಾಕಿಕೊಂಡಿದೆ.

ಈ ನಾಲ್ಕೂ ರಾಜ್ಯಗಳಲ್ಲಿ ಒಟ್ಟು 113 ಲೋಕಸಭಾ ಕ್ಷೇತ್ರಗಳಿವೆ. 2014ರ ಲೋಕಸಭಾ ಚುನಾವಣೆಯಲ್ಲಿ ರಾಜಸ್ಥಾನದಲ್ಲಿ ಪಕ್ಷವು ಒಂದು ಸ್ಥಾನವನ್ನೂ ಗೆದ್ದಿರಲಿಲ್ಲ. ಛತ್ತೀಸಗಡದಲ್ಲಿ ಒಂದು, ಮಹಾರಾಷ್ಟ್ರ ಮತ್ತು ಮಧ್ಯಪ್ರದೇಶಗಳಲ್ಲಿ ತಲಾ ಎರಡು ಕ್ಷೇತ್ರಗಳಲ್ಲಿ ಮಾತ್ರ ಕಾಂಗ್ರೆಸ್ ಅಭ್ಯರ್ಥಿಗಳು ಗೆಲುವು ಸಾಧಿಸಿದ್ದರು.

ಈಚೆಗೆ ನಡೆದ ವಿಧಾನಸಭೆ ಚುನಾವಣೆಗಳಲ್ಲಿ ಮಧ್ಯಪ್ರದೇಶ, ರಾಜಸ್ಥಾನ ಮತ್ತು ಛತ್ತೀಸಗಡದಲ್ಲಿ ಗೆದ್ದು, ಕಾಂಗ್ರೆಸ್ ಅಧಿಕಾರ ಹಿಡಿದಿದೆ. ಇದು ಪಕ್ಷದ ಹುರುಪನ್ನು ಹೆಚ್ಚಿಸಿದೆ. ಮಹಾರಾಷ್ಟ್ರವೂ ಸೇರಿ ನಾಲ್ಕು ರಾಜ್ಯಗಳಿಂದ ಪಕ್ಷದ 50 ಸಂಸದರಾದರೂ ಆರಿಸಿ ಬರಬೇಕು. ಹೀಗಾಗಿ ಪಕ್ಷವು ತಂತ್ರ ರೂಪಿಸುತ್ತಿದೆ ಎಂದು ಮೂಲಗಳು ಹೇಳಿವೆ.

ಬರಹ ಇಷ್ಟವಾಯಿತೆ?

 • 11

  Happy
 • 1

  Amused
 • 0

  Sad
 • 0

  Frustrated
 • 6

  Angry

Comments:

0 comments

Write the first review for this !