ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಭೋಪಾಲ್‌ನಿಂದ ದಿಗ್ವಿಜಯ್ ಸ್ಪರ್ಧೆ

Last Updated 23 ಮಾರ್ಚ್ 2019, 17:28 IST
ಅಕ್ಷರ ಗಾತ್ರ

ಭೋಪಾಲ್: ಮೂರು ದಶಕಗಳಿಂದ ಬಿಜೆಪಿಯ ಭದ್ರಕೋಟೆ ಎನಿಸಿರುವ ಭೋಪಾಲ್‌ಲೋಕಸಭಾ ಕ್ಷೇತ್ರದಿಂದ ಈ ಬಾರಿ ಕಾಂಗ್ರೆಸ್ ಮುಖಂಡ ದಿಗ್ವಿಜಯ ಸಿಂಗ್ ಸ್ಪರ್ಧಿಸಲಿದ್ದಾರೆ.

ಮಧ್ಯಪ್ರದೇಶ ಮುಖ್ಯಮಂತ್ರಿ ಕಮಲನಾಥ್ ಅವರು ಹೋಳಿ ಮಿಲನ ಕಾರ್ಯಕ್ರಮದಲ್ಲಿ ಇದನ್ನು ಘೋಷಿಸಿದರು. ದಿಗ್ವಿಜಯ್ ಸ್ಪರ್ಧಿಸುವುದಾದರೆ ಕಠಿಣ ಸ್ಪರ್ಧೆ ಇರುವ ಕ್ಷೇತ್ರವನ್ನು ನೀಡುವುದಾಗಿ ವಾರದ ಮೊದಲು ತಿಳಿಸಿದ್ದರು. ಈ ಸವಾಲನ್ನು ಸ್ವೀಕರಿಸಿದ್ದರು.

ಇದಕ್ಕೆ ಪ್ರತಿಕ್ರಿಯಿಸಿರುವ ದಿಗ್ವಿಜಯ್, ‘ರಾಜಗಢ ನನ್ನ ಸ್ವಕ್ಷೇತ್ರ. ನನ್ನ ಮೊದಲ ಆಯ್ಕೆ ಅದೇ ಆಗಿತ್ತು. ಆದರೆ ಪಕ್ಷದ ನಿರ್ಧಾರವನ್ನು ಒಪ್ಪಿ, ಭೋಪಾಲ್‌ನಿಂದ ಕಣಕ್ಕಿಳಿಯುತ್ತಿದ್ದೇನೆ’ ಎಂದಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT