ಮಂಗಳವಾರ, ಏಪ್ರಿಲ್ 7, 2020
19 °C

ಕೊರೊನಾ ವೈರಸ್‌ಗೆ ದೇಶದಲ್ಲಿ ಮತ್ತೊಂದು ಬಲಿ: ಮೃತರ ಸಂಖ್ಯೆ 8ಕ್ಕೆ 

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮುಂಬೈ: ಕೊರೊನಾ ವೈರಸ್‌ ಸೋಂಕು ತಗುಲಿ, ಗುಣಮುಖರಾಗಿದ್ದ ಪಿಲಿಪೀನ್ಸ್‌ ಮೂಲದ 68 ವರ್ಷದ ವ್ಯಕ್ತಿಯೊಬ್ಬರು ಮುಂಬೈನ ಆಸ್ಪತ್ರೆಯಲ್ಲಿ ಸೋಮವಾರ ಮೃತಪಟ್ಟಿದ್ದಾರೆ. 

ಮಹಾರಾಷ್ಟ್ರದಲ್ಲಿ ಕೊರೊನಾ ವೈರಸ್‌ನಿಂದ ಸಂಭವಿಸಿದ  ಮೂರನೇ ಸಾವು ಪ್ರಕರಣ ಇದಾಗಿದ್ದು, ದೇಶದಲ್ಲಿ 8ನೇ ಪ್ರಕರಣವಾಗಿದೆ. 
ವ್ಯಕ್ತಿಗೆ ಈ ಮೊದಲು ಕೊರೊನಾ ವೈರಸ್‌ ಸೋಂಕು ಇರುವುದು ದೃಢವಾಗಿತ್ತು. ಹೀಗಾಗಿ ಅವರಿಗೆ ಕಸ್ತೂರಬಾ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿತ್ತು. ಚಿಕಿತ್ಸೆ ನಂತರ ಗುಣಮುಖರಾಗಿದ್ದ ಅವರನ್ನು ಮತ್ತೊಮ್ಮೆ ಪರೀಕ್ಷೆಗೆ ಒಳಪಡಿಸಿದಾಗ ಕೋವಿಡ್‌ 19 ನೆಗೆಟೀವ್‌ ಬಂದಿತ್ತು. ನಂತರ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು ಎಂದು ಮುಂಬೈ ಸ್ಥಳೀಯಾಡಳಿತ ತಿಳಿಸಿದೆ. 

ವ್ಯಕ್ತಿಗೆ ಮಧುಮೇಹ, ಅಸ್ತಮಾ ಇತ್ತು. ಇದರ ಜೊತೆಗೆ ಕಿಡ್ನಿ ವೈಫಲ್ಯಗೊಂಡಿತ್ತು. ಉಸಿರಾಟದ ತೀವ್ರ ಸಮಸ್ಯೆಯೂ ಇತ್ತು ಎಂದು ಸ್ಥಳೀಯಾಡಳಿತ ತಿಳಿಸಿದೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು