ಕೋಲ್ಕತ್ತದಲ್ಲಿ ಸ್ಫೋಟ: ಸಾವು

7

ಕೋಲ್ಕತ್ತದಲ್ಲಿ ಸ್ಫೋಟ: ಸಾವು

Published:
Updated:
Deccan Herald

ಕೋಲ್ಕತ್ತ: ಇಲ್ಲಿನ ಕಝಿಪರ ಪ್ರದೇಶದ ಬಹುಮಹಡಿ ಕಟ್ಟಡದ ಎದುರು ಮಂಗಳವಾರ ಕಡಿಮೆ ತೀವ್ರತೆ ಹೊಂದಿದ ಬಾಂಬ್‌ ಸ್ಫೋಟಗೊಂಡ ಪರಿಣಾಮ ಏಳು ವರ್ಷದ ಬಾಲಕ ಸಾವಿಗೀಡಾಗಿದ್ದು, ಒಂಬತ್ತು ಮಂದಿ ಗಾಯಗೊಂಡಿದ್ದಾರೆ.

ನೆಲಮಹಡಿಯ ಹಣ್ಣಿನ ಅಂಗಡಿ ಎದುರು ಈ ಸ್ಫೋಟ ಸಂಭವಿಸಿದೆ. ಅಮೋನಿಯಂ ನೈಟ್ರೇಟ್‌ ಅನ್ನು ಸ್ಫೋಟಕ್ಕೆ ಬಳಸಿರುವುದು ಪ್ರಾಥಮಿಕ ತನಿಖೆಯಿಂದ ತಿಳಿದು ಬಂದಿದೆ. ಬೆಳಿಗ್ಗೆ 9ಗಂಟೆಗೆ ಈ ಘಟನೆ ನಡೆದಿದ್ದು, ತೀವ್ರ ಗಾಯಗೊಂಡಿದ್ದ ಬಾಲಕ ಆಸ್ಪತ್ರೆಯಲ್ಲಿ ಸಾವಿಗೀಡಾಗಿದ್ದಾನೆ.

ವಿಧಿ ವಿಜ್ಞಾನ ತಂಡ ಮತ್ತು ಬಾಂಬ್‌ ನಿಷ್ಕ್ರಿಯ ದಳ ಸ್ಥಳ ಪರಿಶೀಲನೆ ನಡೆಸಿದೆ. ಈ ಬಗ್ಗೆ ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಹಿರಿಯ ಪೊಲೀಸ್‌ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 1

  Sad
 • 0

  Frustrated
 • 2

  Angry

Comments:

0 comments

Write the first review for this !