ಗುರುವಾರ , ಜೂಲೈ 2, 2020
28 °C

ಮಹಾರಾಷ್ಟ್ರ | ಒಂದೇ ದಿನ 75 ಮಂದಿ ಪೊಲೀಸರಿಗೆ ಕೊರೊನಾ ಪಾಸಿಟಿವ್‌

ಏಜನ್ಸೀಸ್‌ Updated:

ಅಕ್ಷರ ಗಾತ್ರ : | |

ಮುಂಬೈ: ಮಹಾರಾಷ್ಟ್ರದಲ್ಲಿ ಕಳೆದ 24 ಗಂಟೆ ಅವಧಿಯಲ್ಲಿ 75 ಮಂದಿ ಪೊಲೀಸರಿಗೆ ಕೋವಿಡ್‌–19 ಸೋಂಕು ತಗುಲಿರುವುದು ದೃಢಪಟ್ಟಿದೆ. 

ಇದರೊಂದಿಗೆ ಮಹಾರಾಷ್ಟ್ರವೊಂದರಲ್ಲೇ 1964 ಮಂದಿ ಪೊಲೀಸರು ಸೋಂಕಿಗೆ ತುತ್ತಾಗಿದ್ದು, 20 ಮಂದಿ ಮೃತಪಟ್ಟಿದ್ದಾರೆ. 

ಒಟ್ಟು 849 ಮಂದಿ ಪೊಲೀಸರು ಗುಣಮುಖರಾಗಿ ಆಸ್ಪತ್ರೆಗಳಿಂದ ಬಿಡುಗಡೆಯಾಗಿದ್ದಾರೆ. 1095 ಸಕ್ರಿಯ ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ. 

ಕೊರೊನಾದಿಂದ ಅತಿಹೆಚ್ಚು ಸಂಕಷ್ಟಕ್ಕೀಡಾಗಿರುವ ಮಹಾರಾಷ್ಟ್ರದಲ್ಲಿ ಈವರೆಗೆ 54,758 ಮಂದಿಗೆ ಸೋಂಕು ತಗುಲಿದೆ. 1,792 ಸೋಂಕಿತರು ಮೃತಪಟ್ಟಿದ್ದಾರೆ. 16,954 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು