ಗುರುಗ್ರಾಮ: ನಾಲ್ಕು ಅಂತಸ್ತಿನ ಕಟ್ಟಡ ಕುಸಿತ, 8 ಮಂದಿ ಸಿಲುಕಿರುವ ಶಂಕೆ

7

ಗುರುಗ್ರಾಮ: ನಾಲ್ಕು ಅಂತಸ್ತಿನ ಕಟ್ಟಡ ಕುಸಿತ, 8 ಮಂದಿ ಸಿಲುಕಿರುವ ಶಂಕೆ

Published:
Updated:

ಗುರುಗ್ರಾಮ: ಇಲ್ಲಿನ ಉಲ್ಲಾವಾಸ್‌ ಪ್ರದೇಶದಲ್ಲಿ ನಾಲ್ಕು ಅಂತಸ್ತಿನ ನಿರ್ಮಾಣ ಹಂತದ ಕಟ್ಟಡವೊಂದು ಕುಸಿದಿದ್ದು, ಅವಶೇಷಗಳ ಅಡಿಯಲ್ಲಿ 8 ಮಂದಿ ಕಾರ್ಮಿಕರು ಸಿಲುಕಿರುವ ಬಗ್ಗೆ ಶಂಕೆ ವ್ಯಕ್ತವಾಗಿದೆ.

ಗುರುವಾರ ಬೆಳ್ಳಿಗೆ 5 ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ. ಸ್ಥಳದಲ್ಲಿ ಹರಿಯಾಣದ ಅಗ್ನಿಶಾಮಕ ದಳದ ಸಿಬ್ಬಂದಿ ಹಾಗೂ ಸ್ಥಳೀಯ ಪೊಲೀಸರು ರಕ್ಷಣಾ ಕಾರ್ಯಾಚರಣೆ ನಡೆಸುತ್ತಿದ್ದಾರೆ. 

ಭಾರೀ ಪ್ರಮಾಣದ ಕಾಂಕ್ರೀಟ್, ಕಬ್ಬಿಣದ ಗ್ರಿಲ್ಸ್‌ ಹೆಚ್ಚಿರುವ ಕಾರಣ ಕಾರ್ಯಾಚರಣೆಗೆ ಅಡಚಣೆ ಉಂಟಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. 

ರಾಷ್ಟ್ರೀಯ ವಿಪತ್ತು ನಿರ್ವಹಣಾ ದಳದ ನೇತೃತ್ವದಲ್ಲಿ ಮೂರು ತಂಡಗಳು ಕಾರ್ಯಾಚರಣೆ ನಡೆಸುತ್ತಿವೆ.

ಬರಹ ಇಷ್ಟವಾಯಿತೆ?

 • 3

  Happy
 • 0

  Amused
 • 1

  Sad
 • 0

  Frustrated
 • 0

  Angry

Comments:

0 comments

Write the first review for this !