ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೈಕ್‌ನಲ್ಲಿ ನಾಯಿ ಕರೆದೊಯ್ದ ವ್ಯಕ್ತಿಗೆ ₹2,500 ದಂಡ

Last Updated 29 ಡಿಸೆಂಬರ್ 2019, 9:52 IST
ಅಕ್ಷರ ಗಾತ್ರ

ತಿರುವನಂತಪುರ: ಕೋಟಯಂ ಜಿಲ್ಲೆಯ ಮಣ್ಣಾರ್‌ಕಾಡ್‌ನಲ್ಲಿ ದ್ವಿಚಕ್ರ ವಾಹನದಲ್ಲಿ ನಾಯಿಯನ್ನು ಕರೆದೊಯ್ದ ವ್ಯಕ್ತಿಯೊಬ್ಬರಿಗೆ ಪ್ರಾದೇಶಿಕ ಸಾರಿಗೆ ಅಧಿಕಾರಿಗಳು ₹2,500 ದಂಡ ವಿಧಿಸಿದ್ದಾರೆ.

ಅಧಿಕಾರಿಗಳು ವಾಹನ ತಪಾಸಣೆ ನಡೆಸುತ್ತಿದ್ದ ವೇಳೆ ವ್ಯಕ್ತಿಯೊಬ್ಬರು ದ್ವಿಚಕ್ರವಾಹನದಲ್ಲಿ ನಾಯಿಯನ್ನು ಕೂರಿಸಿಕೊಂಡು, ಹೆಲ್ಮೆಟ್‌ ಧರಿಸದೆ ಪ್ರಯಾಣಿಸುತ್ತಿರುವುದು ಗಮನಕ್ಕೆ ಬಂದಿದೆ. ಕೂಡಲೇ ಅವರು ಈ ದೃಶ್ಯವನ್ನು ವಿಡಿಯೊ ಮಾಡಿದ್ದರು.

ಬಳಿಕ ದ್ವಿಚಕ್ರ ವಾಹನದ ಮಾಲೀಕನಿಗೆ ದಂಡ ಪಾವತಿಸಲು ಹಾಗೂ ವಿವರಣೆ ನೀಡಲು ಅಧಿಕಾರಿಗಳು ನೋಟಿಸ್‌ ಕಳುಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT