ಸೋಮವಾರ, ಜನವರಿ 20, 2020
27 °C

8 ವರ್ಷದ ಬಾಲಕಿ ಮೇಲೆ ಅತ್ಯಾಚಾರ

ಪಿಟಿಐ Updated:

ಅಕ್ಷರ ಗಾತ್ರ : | |

ಅಮೃತಸರ : ಎಂಟು ವರ್ಷದ ಬಾಲಕಿ ಮೇಲೆ 15 ವರ್ಷದ ಬಾಲಕ ಅತ್ಯಾಚಾರ ಮಾಡಿರುವುದು ಇಲ್ಲಿನ ಖಾಸಗಿ ಶಾಲೆಯೊಂದರಲ್ಲಿ ನಡೆದಿದೆ.

‘ಘಟನೆಯು ಡಿಸೆಂಬರ್‌ 13ರಂದು ನಡೆದಿದ್ದು, ಬಾಲಕ 10ನೇ ತರಗತಿ ಓದುತ್ತಿದ್ದಾನೆ. ಈತನನ್ನು ಪೊಲೀಸರು ಬಂಧಿಸಿ, ಅಮೃತಸರದ ಬಾಲಾಪರಾಧ ನ್ಯಾಯಾಲಯಕ್ಕೆ ಹಾಜರುಪಡಿಸಿದರು. ನಂತರ ಬಾಲಕನನ್ನು  ಬಾಲಮಂದಿರಕ್ಕೆ ಕಳುಹಿಸಲಾಯಿತು’ ಎಂದು ಪೊಲೀಸ್‌ ಅಧಿಕಾರಿಯೊಬ್ಬರು ಹೇಳಿದರು. 

ಪ್ರಕರಣದ ಬಳಿಕ ಪೋಷಕರು ಶಾಲೆಯ ಮುಂದೆ ಪ್ರತಿಭಟನೆ ನಡೆಸಿದರು. ಕೃತ್ಯದ ನಂತರ ಬಾಲಕನು ಶಾಲೆಯಲ್ಲಿ ಅಳವಡಿಸಿದ್ದ ಸಿ.ಸಿ.ಟಿ.ವಿ ಕ್ಯಾಮೆರಾವನ್ನು ತೆಗೆದುಕೊಂಡು ಹೋಗಿದ್ದಾನೆ ಎಂದು ಪ್ರತಿಭಟನನಿರತ ಪೋಷಕರು ದೂರಿದ್ದಾರೆ. ವಿದ್ಯಾರ್ಥಿನಿಯರಿಗೆ ಸೂಕ್ತ ರಕ್ಷಣೆ ಒದಗಿಸದ ಶಾಲೆಯ ಆಡಳಿತ ಮಂಡಳಿ ವಿರುದ್ಧವೂ ಪ್ರಕರಣ ದಾಖಲಿಸಬೇಕು ಎಂದು ಅವರು ಆಗ್ರಹಿಸಿದ್ದಾರೆ. 

‘ಬಾಲಕನ ವಿರುದ್ಧ ಸೆಕ್ಷನ್‌ 376 (ಅತ್ಯಾಚಾರಕ್ಕೆ ಶಿಕ್ಷೆ) ಹಾಗೂ ಪೋಕ್ಸೊ ಕಾಯ್ದೆ ಅಡಿ ಎಫ್‌ಐಆರ್‌ ದಾಖಲಿಸಲಾಗಿದೆ. ಪ್ರಕರಣದ ತನಿಖೆ ಪ್ರಗತಿಯಲ್ಲಿದೆ’ ಎಂದು ತಿಳಿಸಿದರು.

 

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು