ಶುಕ್ರವಾರ, ಜೂನ್ 5, 2020
27 °C
ಗುಜರಾತ್‌ನ ಸೂರತ್‌ನಲ್ಲಿ ಪ್ರಕರಣ

ಲಾಕ್‌ಡೌನ್ ಉಲ್ಲಂಘನೆ, ಪೊಲೀಸರ ಮೇಲೆ ಹಲ್ಲೆ ಆರೋಪ: 93 ವಲಸೆ ಕಾರ್ಮಿಕರ ಬಂಧನ

ಪಿಟಿಐ Updated:

ಅಕ್ಷರ ಗಾತ್ರ : | |

ಸೂರತ್: ಲಾಕ್‌ಡೌನ್ ಉಲ್ಲಂಘಿಸಿದ ಮತ್ತು ಪೊಲೀಸರ ಮೇಲೆ ಹಲ್ಲೆ ನಡೆಸಿದ ಆರೋಪದಲ್ಲಿ ಗುಜರಾತ್‌ನ ಸೂರತ್‌ನಲ್ಲಿ 93 ವಲಸೆ ಕಾರ್ಮಿಕರನ್ನು ಬಂಧಿಸಲಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ತಮ್ಮ ಊರುಗಳಿಗೆ ತೆರಳಲು ಸಾರಿಗೆ ವ್ಯವಸ್ಥೆ ಮಾಡುವಂತೆ ಆಗ್ರಹಿಸಿ ಸುಮಾರು 500 ಜನ ಕಾರ್ಮಿಕರು ಸೂರತ್‌ನ ಗಣೇಶ ನಗರ ಮತ್ತು ತಿರುಪತಿ ನಗರ ಪ್ರದೇಶಗಳಲ್ಲಿ ಭಾನುವಾರ ಮಧ್ಯಾಹ್ನ ರಸ್ತೆಗಿಳಿದಿದ್ದರು. ಈ ವೇಳೆ ಪರಿಸ್ಥಿತಿ ಉದ್ವಿಗ್ನಗೊಂಡಿತ್ತು ಎಂದು ಡಿಸಿಪಿ ವಿಧಿ ಚೌಧರಿ ಹೇಳಿದ್ದಾರೆ.

ಇದನ್ನೂ ಓದಿ: ಉತ್ತರ ಪ್ರದೇಶ: ಕಾರ್ಮಿಕರ ಮೇಲೆ ರಾಸಾಯನಿಕ ಸಿಂಪಡಿಸಿದ್ದಕ್ಕೆ ಪ್ರಿಯಾಂಕಾ ವಿರೋಧ

ವಲಸೆ ಕಾರ್ಮಿಕರ ಪೈಕಿ ಹೆಚ್ಚಿನವರು ಉತ್ತರ ಪ್ರದೇಶ ಮತ್ತು ಬಿಹಾರದವರಾಗಿದ್ದು, ಇಲ್ಲಿನ ಜವಳಿ ಸಂಸ್ಕರಣಾ ಘಟಕಗಳಲ್ಲಿ  ಎಂದು ಮತ್ತೊಬ್ಬ ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.

‘ಬೀದಿಗಿಳಿದ ಕಾರ್ಮಿಕರನ್ನು ಒಳಹೋಗುವಂತೆ ಪೊಲೀಸರು ಮನವೊಲಿಸಲು ಮುಂದಾದರು. ಈ ವೇಳೆ ಅವರು ಕಲ್ಲುತೂರಾಟ ಆರಂಭಿಸಿದ್ದಾರೆ. ಕೆಲವು ಪೊಲೀಸ್ ವಾಹನಗಳಿಗೆ ಹಾನಿಯಾಗಿದೆ’ ಎಂದು ಚೌಧರಿ ತಿಳಿಸಿದ್ದಾರೆ.

ಗಲಭೆ ನಿಯಂತ್ರಿಸಲು ಅಶ್ರುವಾಯು ಸಿಡಿಸಲಾಯಿತು. ಕೆಲವು ದುಷ್ಕರ್ಮಿಗಳನ್ನು ಭಾನುವಾರ ರಾತ್ರಿ ಬಂಧಿಸಿದ್ದೇವೆ. ಇನ್ನು ಕೆಲವರನ್ನು ಇಂದು ಬೆಳಿಗ್ಗೆ ಬಂಧಿಸಿದ್ದೇವೆ ಎಂದು ಅವರು ತಿಳಿಸಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು