ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಎಸ್ಸೆಸ್ಸೆಲ್ಸಿ: ಕೇರಳದಲ್ಲಿ ಶೇ. 98.82 ಫಲಿತಾಂಶ

Last Updated 30 ಜೂನ್ 2020, 14:41 IST
ಅಕ್ಷರ ಗಾತ್ರ

ತಿರುವನಂತಪುರ: ಕೇರಳದ ಎಸ್ಸೆಸ್ಸೆಲ್ಸಿ ಪರೀಕ್ಷೆಯ ಫಲಿತಾಂಶ ಮಂಗಳವಾರ ಪ್ರಕಟವಾಗಿದ್ದು, ಶೇಕಡ 98.82 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ.

ಒಟ್ಟು 2,945 ಕೇಂದ್ರಗಳಲ್ಲಿ 4,22,092 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರು. 41,906 ವಿದ್ಯಾರ್ಥಿಗಳು ಎಲ್ಲಾ ವಿಷಯಗಳಲ್ಲೂ ಎ+ ಶ್ರೇಣಿ ಪಡೆದಿದ್ದಾರೆ. 1,837 ಶಾಲೆಗಳು ಶೇ 100ರಷ್ಟು ಫಲಿತಾಂಶ ಪಡೆದಿವೆ. ಕಳೆದ ವರ್ಷ ರಾಜ್ಯದಲ್ಲಿ ಶೇ 98.11 ಫಲಿತಾಂಶ ಬಂದಿತ್ತು.

ಮೇ 10ರಿಂದ 19 ರವರೆಗೆ ಪರೀಕ್ಷೆ ನಡೆಸಲಾಗಿತ್ತು.ಕೊರೊನಾ ಬಿಕ್ಕಟ್ಟಿನ ಸಂದರ್ಭದಲ್ಲಿಯೇ ಸರ್ಕಾರ ಎಸ್ಸೆಸ್ಸೆಲ್ಸಿ ಪರೀಕ್ಷೆ ನಡೆಸುವ ನಿರ್ಧಾರ ತೆಗೆದುಕೊಂಡಿದ್ದರಿಂದ ವಿರೋಧ ಪಕ್ಷಗಳು ಮತ್ತು ಪೋಷಕರಿಂದ ವಿರೋಧ ವ್ಯಕ್ತವಾಗಿತ್ತು. ಆದರೆ, ಹಲವು ಸುರಕ್ಷತಾ ಕ್ರಮಗಳನ್ನು ತೆಗೆದುಕೊಂಡು ಪರೀಕ್ಷೆ ನಡೆಸಲಾಗಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT