ಶನಿವಾರ, ಏಪ್ರಿಲ್ 4, 2020
19 °C

ಕನ್ಹಯ್ಯ ಪ್ರಕರಣ ವರದಿಗೆ ಸೂಚನೆ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ನವದೆಹಲಿ: ಜೆಎನ್‌ಯುನ ವಿದ್ಯಾರ್ಥಿ ಸಂಘದ ಮಾಜಿ ಅಧ್ಯಕ್ಷ ಕನ್ಹಯ್ಯ ಕುಮಾರ್ ಮತ್ತು ಇತರರ ವಿರುದ್ಧ ಕಾನೂನು ಕ್ರಮ ಜರುಗಿಸಲು ಅನುಮತಿ ನೀಡುವ ವಿಚಾರದ ಕುರಿತು ಏಪ್ರಿಲ್‌ 3ರ ಒಳಗೆ ಪ್ರಗತಿ ವರದಿ ನೀಡಬೇಕು ಎಂದು ದೆಹಲಿ ಸರ್ಕಾರಕ್ಕೆ ನ್ಯಾಯಾಲಯ ನಿರ್ದೇಶನ ನೀಡಿದೆ.

ಕನ್ನಯ್ಯ ಕುಮಾರ್‌ ಹಾಗೂ ಇತರರ ವಿರುದ್ಧ  ದಾಖಲಾಗಿದ್ದ ದೇಶದ್ರೋಶದ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯ ಮೆಟ್ರೊಪಾಲಿಟನ್‌ ಮ್ಯಾಜಿಸ್ಟ್ರೇಟ್‌ ಪುರುಷೋತ್ತಮ್‌ ಪಾಠಕ್‌ ನಿರ್ದೇಶನ ನೀಡಿದ್ದಾರೆ. ಜತೆಗೆ, ಸರ್ಕಾರಕ್ಕೆ ಈ ಕುರಿತು ಜ್ಞಾಪಕ ಮಾಡುವಂತೆಯೂ ಪೊಲೀಸರಿಗೆ ಕೋರ್ಟ್ ಹೇಳಿದೆ.

ಇವರ ವಿರುದ್ಧ ಕ್ರಮ ಜರುಗಿಸಲು ಒಪ್ಪಿಗೆ ನೀಡುವಲ್ಲಿ ವಿಳಂಬವಾಗುತ್ತಿದೆ. ಈ ಕುರಿತ ಪತ್ರವು ಇನ್ನೂ ದೆಹಲಿ ಸರ್ಕಾರದ ಬಳಿ ಇದೆ ಎಂದು ಪೊಲೀಸರು ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು