ಮಂಗಳವಾರ, ಮೇ 26, 2020
27 °C

ಕೊರೊನಾ ಭೀತಿ: ಉತ್ತರ ಪ್ರದೇಶದಲ್ಲಿ ಸರ್ಕಾರಿ ಉದ್ಯೋಗಿ ಆತ್ಮಹತ್ಯೆ

ಏಜೆನ್ಸೀಸ್‌ Updated:

ಅಕ್ಷರ ಗಾತ್ರ : | |

ಉತ್ತರಪ್ರದೇಶ: ಸರ್ಕಾರಿ ಉದ್ಯೋಗಿಯೊಬ್ಬರು ಕೊರೊನಾ ವೈರಸ್ ಸೋಂಕಿನ ಭಯದಿಂದ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಇಲ್ಲಿನ ನಕುರ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ಶಹರನ್ ಪುರ ನಿವಾಸಿ ಆತ್ಯಹತ್ಯೆ ಮಾಡಿಕೊಂಡಿದ್ದು, ಇವರು ಬುಧವಾರ ರಾತ್ರಿ ತಮ್ಮ ಕೊಠಡಿಯಲ್ಲಿ ನೇಣು ಬಿಗಿದುಕೊಂಡು ಮೃತಪಟ್ಟಿದ್ದಾರೆ. ಬೆಳಿಗ್ಗೆ ಎಂದಿನಂತೆ ಮನೆಯವರು ನೋಡಿದಾಗ ಆತ್ಮಹತ್ಯೆ ಮಾಡಿಕೊಂಡಿರುವುದು ಬೆಳಕಿಗೆ ಬಂದಿದೆ. ಶವದ ಪಕ್ಕದಲ್ಲಿ ಪತ್ರವೊಂದು ದೊರೆತಿದ್ದು, ಅದರಲ್ಲಿ ಕೊರೊನಾ ವೈರಸ್ ಸೋಂಕಿನಿಂದ ಭಯಗೊಂಡಿದ್ದಾಗಿ ಬರೆದಿದ್ದಾರೆ.

ಆತ ಕೊರೊನಾ ಸೋಂಕು ಭಯದಿಂದ ಮಾನಸಿಕವಾಗಿ ಆಘಾತಗೊಂಡಿದ್ದ ಎಂದು ಕುಟುಂಬದ ಸದಸ್ಯರು ಪೊಲೀಸರಿಗೆ ತಿಳಿಸಿದ್ದಾರೆ.
ನಕುರ್ ಪೊಲೀಸರು ಸ್ಥಳಕ್ಕೆ ಧಾವಿಸಿ ಶವದ ಮಹಜರು ನಡೆಸಿದ್ದಾರೆ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿದ್ದು ತನಿಖೆ ಮುಂದುವರಿದಿದೆ ಎಂದು ಎಸ್ ಪಿ ದಿನೇಶ್ ಕುಮಾರ್ ಪಿ. ಸುದ್ದಿಗಾರರಿಗೆ ತಿಳಿಸಿದ್ದಾರೆ.

 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು