ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹಿಂದೂಸ್ತಾನದಲ್ಲಿ ಧರ್ಮದ ಆಧಾರದಲ್ಲಿ ತಾರತಮ್ಯ ಮಾಡಲಾಗದು: ರಾಜನಾಥ್ ಸಿಂಗ್

ಸಿಎಎ ಬಗ್ಗೆ ತಪ್ಪು ಕಲ್ಪನೆ ಬೇಡ: ಸಚಿವರಿಂದ ಮನವಿ
Last Updated 5 ಜನವರಿ 2020, 10:32 IST
ಅಕ್ಷರ ಗಾತ್ರ

ಲಖನೌ:ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ಬಗ್ಗೆ ಜನರು ತಪ್ಪು ಕಲ್ಪನೆ ಹೊಂದಬಾರದು ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಹೇಳಿದರು. ಪೌರತ್ವ ಕಾಯ್ದೆ ಕುರಿತು ಅರಿವು ಮೂಡಿಸುವ ಸಲುವಾಗಿ ತಾವು ಪ್ರತಿನಿಧಿಸುತ್ತಿರುವ ಲೋಕಸಭಾ ಕ್ಷೇತ್ರವಾದ ಲಖನೌಗೆ ಅವರು ಭಾನುವಾರ ಭೇಟಿ ನೀಡಿದರು.

ಈ ವೇಳೆ ಮಾತನಾಡಿದ ಅವರು, ‘ಸಿಎಎ ಕುರಿತು ಯಾವುದೇ ತಪ್ಪು ಕಲ್ಪನೆ ಹೊಂದದಂತೆ ಜನರಿಗೆ ಸಂದೇಶ ನೀಡಲು ನಮ್ಮ ಪಕ್ಷ ನಿರ್ಧರಿಸಿದೆ. ಭಾರತೀಯ ಸಂಸ್ಕೃತಿಯು ನಮಗೆ ಸರ್ವ ಧರ್ಮ ಸಮನ್ವಯದ ಪಾಠ ಕಲಿಸಿದೆ. ಹಿಂದೂಸ್ತಾನೀಯರಿಗೆ ಜಾತಿ ಮತ್ತು ಧರ್ಮದ ಆಧಾರದಲ್ಲಿ ತಾರತಮ್ಯ ಮಾಡಲಾಗದು’ ಎಂದು ಹೇಳಿದ್ದಾರೆ.

‘ವಸುಧೈವ ಕುಟುಂಬಕಂ (ಇಡೀ ವಿಶ್ವವೇ ಒಂದು ಕುಟುಂಬ)’ ಎಂಬ ಸಂದೇಶವನ್ನು ಜಗತ್ತಿಗೆ ಸಾರಿದ್ದೇ ಭಾರತ. ನಮ್ಮ ದೇಶದ ಸಾಂಸ್ಕೃತಿಕ ಮೌಲ್ಯಗಳನ್ನು ನಮ್ಮ ಪಕ್ಷ ನಾಶಗೊಳಿಸುವುದಿಲ್ಲ ಎಂದು ರಾಜನಾಥ್ ಹೇಳಿದರು.

ಸಿಎಎ ವಿರೋಧಿಸಿ ನಡೆದಿದ್ದ ಹಿಂಸಾತ್ಮಕ ಪ್ರತಿಭಟನೆಯಲ್ಲಿ ಉತ್ತರ ಪ್ರದೇಶದಲ್ಲಿ 19 ಮಂದಿ ಮೃತಪಟ್ಟಿದ್ದಾರೆ. ಇದಾದ ಕೆಲವು ದಿನಗಳ ಬಳಿಕ ರಾಜನಾಥ್ ಅಲ್ಲಿಗೆ ಭೇಟಿ ನೀಡಿದ್ದಾರೆ. ಸಿಎಎ ಕುರಿತ ಮಾಹಿತಿಯುಳ್ಳ ಕರಪತ್ರಗಳನ್ನೂ ಅವರು ವಿತರಿಸಿದ್ದಾರೆ. ಅಲ್ಲದೆ, ಜನರಲ್ಲಿ ಅರಿವು ಮೂಡಿಸುವ ಕೆಲಸ ಮಾಡಬೇಕು ಎಂದು ಮಾಧ್ಯಮಗಳಲ್ಲಿ ಮನವಿ ಮಾಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT