ಭಾನುವಾರ, ಜನವರಿ 26, 2020
23 °C

ಕಿಸಾನ್‌ ಸಮ್ಮಾನ್‌ಗೆ ಆಧಾರ್‌ ಕಡ್ಡಾಯ

ಪಿಟಿಐ Updated:

ಅಕ್ಷರ ಗಾತ್ರ : | |

ನವದೆಹಲಿ: ‘ಪ್ರಧಾನಮಂತ್ರಿ ಕಿಸಾನ್‌ ಸಮ್ಮಾನ್‌ ನಿಧಿಯ (ಪಿಎಂ–ಕಿಸಾನ್‌) ಪ್ರಯೋಜನ ಪಡೆಯಲು ಆಧಾರ್‌ ಸಂಖ್ಯೆ ಜೋಡಣೆಯಾಗಿರುವ ಬ್ಯಾಂಕ್‌ ಖಾತೆ ಹೊಂದಿರುವುದು ಕಡ್ಡಾಯ’ ಎಂದು ಕೇಂದ್ರ ಸರ್ಕಾರ ಹೇಳಿದೆ.

‘ಈ ಯೋಜನೆಯ ಫಲಾನುಭವಿಗಳ ಖಾತೆಗೆ ನೇರವಾಗಿ ಹಣವನ್ನು ವರ್ಗಾಯಿಸುವ ವ್ಯವಸ್ಥೆಯನ್ನು ಈ ತಿಂಗಳಿನಿಂದಲೇ ಜಾರಿಗೆ ತರಲಾಗುವುದು. ಅರ್ಹ ರೈತರ, ಆಧಾರ್‌ ಜೋಡಣೆಯಾದ ಬ್ಯಾಂಕ್‌ ಖಾತೆಗಳಿಗೆ ಮಾತ್ರ ಹಣ ವರ್ಗಾವಣೆ ಮಾಡಲಾಗುವುದು’ ಎಂದು ಕೃಷಿ ಸಚಿವ ನರೇಂದ್ರಸಿಂಗ್‌ ತೋಮರ್‌ ಮಂಗಳವಾರ ಲೋಕಸಭೆಗೆ ತಿಳಿಸಿದರು.

ಈ ಯೋಜನೆಯಡಿ ಕೇಂದ್ರ ಸರ್ಕಾರವು ರೈತರ ಖಾತೆಗಳಿಗೆ ವರ್ಷದಲ್ಲಿ ತಲಾ ₹ 6,000 ನೆರವು ವರ್ಗಾವಣೆ ಮಾಡುತ್ತದೆ. ಇದನ್ನು ಮೂರು ಸಮಾನ ಕಂತುಗಳಲ್ಲಿ ನೀಡಲಾಗುತ್ತದೆ. 14 ಕೋಟಿ ರೈತರಿಗೆ ಈ ನೆರವು ಲಭಿಸಲಿದೆ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು