ಶುಕ್ರವಾರ, ಫೆಬ್ರವರಿ 21, 2020
25 °C

ದೆಹಲಿ ಪುತ್ರನನ್ನು ಆಶೀರ್ವದಿಸಲು ರಾಮ್‌ಲೀಲಾ ಮೈದಾನಕ್ಕೆ ಬನ್ನಿ: ಮನೀಷ್‌ ಸಿಸೋಡಿಯ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

prajavani

ನವದೆಹಲಿ: ಮುಖ್ಯಮಂತ್ರಿಯಾಗಿ ಆಮ್ ಆದ್ಮಿ ಪಕ್ಷದ ನಾಯಕ ಅರವಿಂದ ಕೇಜ್ರಿವಾಲ್ ಸೇರಿದಂತೆ ಎಎಪಿ ಸರ್ಕಾರದ ಎಲ್ಲ ಸಂಪುಟ ದರ್ಜೆ ಸಚಿವರು ಫೆಬ್ರುವರಿ 16ರಂದು ರಾಮಲೀಲಾ ಮೈದಾನದಲ್ಲಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂದು ಪಕ್ಷದ ನಾಯಕ ಮನೀಷ್‌ ಸಿಸೋಡಿಯಾ ತಿಳಿಸಿದ್ದಾರೆ. 

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರೊಂದಿಗೆ ಸಂಪುಟದ ಸಚಿವರೆಲ್ಲರೂ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಪ್ರಮಾಣವಚನ ಕಾರ್ಯಕ್ರಮವು ಬೆಳಗ್ಗೆ 10 ಗಂಟೆಗೆ ರಾಮ್ ಲೀಲಾ ಮೈದಾನದಲ್ಲಿ ಆರಂಭಗೊಳ್ಳಲಿದೆ ಎಂದು ತಿಳಿಸಿದರು. 
ಅರವಿಂದ ಕೇಜ್ರಿವಾಲ್ ಅವರು ಮೂರನೇ ಬಾರಿಗೆ ದೆಹಲಿ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಲಿದ್ದಾರೆ. 

ಇದಲ್ಲದೆ ಟ್ವೀಟ್ ಮಾಡಿರುವ ಸಿಸೋಡಿಯಾ, ದೆಹಲಿಯ ಪುತ್ರ ಅರವಿಂದ ಕೇಜ್ರಿವಾಲ್ ಮತ್ತು ಅವರ ನಾಯಕತ್ವದಲ್ಲಿ ಹೊಸ ಸರ್ಕಾರದ ಸಂಪುಟದ ಸಚಿವರು ಫೆ. 16ರಂದು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. 10 ಗಂಟೆಗೆ ಸರಿಯಾಗಿ ಎಲ್ಲರೂ ಬಂದು ನಿಮ್ಮ ಪುತ್ರನಿಗೆ ಆಶೀರ್ವದಿಸಿ ಮತ್ತು ಬೆಂಬಲಿಸಿ ಎಂದು ಈ ಮೂಲಕ ಮನವಿ ಮಾಡಿಕೊಳ್ಳುತ್ತೇನೆ ಎಂದು ಹೇಳಿದ್ದಾರೆ. 

ಬಿಜೆಪಿಯ ಬಲಿಷ್ಠ ಪ್ರಚಾರದ ನಡುವೆಯೂ ದೆಹಲಿ ವಿಧಾನಸಭಾ ಚುನಾವಣೆಯ 70 ವಿಧಾನಸಭಾ ಕ್ಷೇತ್ರಗಳ ಪೈಕಿ ಆಮ್ ಆದ್ಮಿ ಪಕ್ಷ 62 ಸ್ಥಾನಗಳಲ್ಲಿ ವಿಜಯ ಸಾಧಿಸಿದೆ. ಕಳೆದ ಚುನಾವಣೆಗೆ ಹೋಲಿಸಿದರೆ ಈ ಬಾರಿ ಎಎಪಿಯು 5 ಸ್ಥಾನಗಳನ್ನು ಕಳೆದುಕೊಂಡಿದ್ದರೂ ಕೂಡ ಸರ್ಕಾರ ರಚನೆಗೆ ಯಾವುದೇ ಅಡ್ಡಿಯಿಲ್ಲ. ಇನ್ನು ಬಿಜೆಪಿಯು ಕಳೆದ ಬಾರಿಗಿಂತ 5 ಸ್ಥಾನಗಳಲ್ಲಿ ವಿಜಯ ಸಾಧಿಸುವ ಮೂಲಕ ಒಟ್ಟಾರೆ 8 ಸ್ಥಾನಗಳಲ್ಲಿ ಗೆದ್ದಿದೆ. ಕಳೆದ ಬಾರಿಯಂತೆ ಈ ಸಲವು ಕಾಂಗ್ರೆಸ್‌ ಶೂನ್ಯ ಸಂಪಾದನೆಗೆ ತೃಪ್ತಿಪಟ್ಟುಕೊಂಡಿದೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು