ಶನಿವಾರ, ಮಾರ್ಚ್ 28, 2020
19 °C

ಗುಪ್ತಚರ ಅಧಿಕಾರಿ ಕೊಲೆ ಆರೋಪ: ಕಾರ್ಪೊರೇಟರ್‌ ತಾಹಿರ್‌ಗೆ ಎಎಪಿ ಅಮಾನತು ಶಿಕ್ಷೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ದೆಹಲಿ: ಗುಪ್ತಚರ ವಿಭಾಗದ (ಐಬಿ) ಅಧಿಕಾರಿ ಅಂಕಿತ್‌ ಶರ್ಮಾ ಅವರ ಹತ್ಯೆಗೆ ಸಂಬಂಧಿಸಿ ಎಎಪಿಯ ಕೌನ್ಸಿಲರ್‌ ತಾಹಿರ್‌ ಹುಸೇನ್‌ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. 

ಹತ್ಯೆಯ ಹಿಂದೆ ತಾಹಿರ್‌ ಕೈವಾಡ ಇದೆ ಎಂದು ಅಂಕಿತ್‌ ಅವರ ತಂದೆ ರವೀಂದ್ರ ಶರ್ಮಾ ಆರೋಪಿಸಿದ್ದಾರೆ. 


ದೆಹಲಿ ಎಎಪಿ ಕಾರ್ಪೊರೇಟರ್‌ ತಾಹಿರ್‌ ಹುಸೇನ್‌ ಒಡೆತನದ ಕಟ್ಟಡದಲ್ಲಿ ಪತ್ತೆಯಾದ ಪೆಟ್ರೋಲ್‌ ಬಾಂಬ್‌ಗಳು 

ತಾಹಿರ್‌ ಅವರ ಮಾಲೀಕತ್ವದ ಐದು ಅಂತಸ್ತಿನ ಕಟ್ಟಡದ ತಾರಸಿಯಿಂದ ಕಲ್ಲು ಮತ್ತು ಪೆಟ್ರೋಲ್‌ ಬಾಂಬ್‌ಗಳನ್ನು ಎಸೆಯಲಾಗಿದೆ ಎಂದು ಸ್ಥಳೀಯರೂ ಹೇಳಿದ್ದಾರೆ. ಹಿಂಸಾಚಾರದಲ್ಲಿ ತಾಹಿರ್‌ ಕೈವಾಡ ಇದೆ ಎಂದು ಬಿಜೆಪಿ ಮುಖಂಡ ಕಪಿಲ್‌ ಮಿಶ್ರಾ ಅವರೂ ಆರೋಪಿಸಿದ್ದಾರೆ. ತಾಹಿರ್‌ ವಿರುದ್ಧ ಕೊಲೆ ಮತ್ತು ಗಲಭೆ ಪ್ರಕರಣ ದಾಖಲಿಸಲಾಗಿದೆ. 


ತಾಹಿರ್‌ ಒಡೆತನದ ಕಟ್ಟಡದಲ್ಲಿ ಪತ್ತೆಯಾದ ಆ್ಯಸಿಡ್‌ ಪೊಟ್ಟಣಗಳು 

ಇದೇ ಹಿನ್ನೆಲೆಯಲ್ಲಿ ಎಎಪಿಯು ತಾಹಿರ್‌ ಹುಸೇನ್‌ನನ್ನು ಪಕ್ಷ ಪ್ರಾಥಮಿಕ ಸದಸ್ಯತ್ವದಿಂದ ಅಮಾನತು ಮಾಡಿ ಗುರುವಾರ ರಾತ್ರಿ ಆದೇಶ ಹೊರಡಿಸಿದೆ. 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು