ವಿಂಗ್‌ ಕಮಾಂಡರ್‌ ಅಭಿನಂದನ್‌ ಜೊತೆ ಸೆಲ್ಫಿ

ಗುರುವಾರ , ಮೇ 23, 2019
32 °C

ಫಲಿತಾಂಶ (ಮುನ್ನಡೆ+ಗೆಲುವು) 0/542LIVE

ವಿಂಗ್‌ ಕಮಾಂಡರ್‌ ಅಭಿನಂದನ್‌ ಜೊತೆ ಸೆಲ್ಫಿ

Published:
Updated:
Prajavani

ನವದೆಹಲಿ: ಬಾಲಾಕೋಟ್‌ ಮೇಲಿನ ದಾಳಿಯ ನಂತರ ಭಾರತದ ವಾಯುಗಡಿ ದಾಟಿ ಬಂದಿದ್ದ ಪಾಕಿಸ್ತಾನದ ಯುದ್ಧ ವಿಮಾನಗಳನ್ನು ಬೆನ್ನಟ್ಟಿ ಹೋಗಿ ಅಲ್ಲಿಯೇ ಸೆರೆ ಸಿಕ್ಕಿದ್ದ ಭಾರತೀಯ ವಿಂಗ್‌ ಕಮಾಂಡರ್‌ ಅಭಿನಂದನ್‌ ವರ್ಧಮಾನ್‌ ಅವರು ಇತ್ತೀಚೆಗೆ ಜಮ್ಮು ಕಾಶ್ಮೀರದಲ್ಲಿನ ತಮ್ಮ ಸಹೋದ್ಯೋಗಿಗಳನ್ನು ಭೇಟಿಯಾಗಿದ್ದಾರೆ.

ಈ ವೇಳೆ ಸಹೋದ್ಯೋಗಿಗಳು ಸೆಲ್ಫಿ ತೆಗೆದುಕೊಳ್ಳುತ್ತಿರುವ ಮತ್ತು  ವಿಡಿಯೊ ಸಾಮಾಜಿಕ ತಾಣದಲ್ಲಿ ವೈರಲ್‌ ಆಗಿದೆ.

ಪಾಕಿಸ್ತಾನದಿಂದ ಬಿಡುಗಡೆಯಾದ ನಂತರದ ದಿನಗಳಲ್ಲಿ ಅಭಿನಂದನ್‌ ವರ್ಧಮಾನ್‌ ಅವರು ಹಲವು ಬಗೆಯ ವೈದ್ಯಕೀಯ ತಪಾಸಣೆಗಳಿಗೆ ಒಳಗಾಗಿದ್ದಾರೆ. ಅವರನ್ನು ಜಮ್ಮು ವಾಯು ನೆಲೆಯಿಂದ ಬೇರೆ ವಾಯು ನೆಲೆಗೆ ವಾಯುಪಡೆಯು ವರ್ಗಾವಣೆ ಮಾಡಿದೆ.

ಈ ನಡುವೆ ಅಭಿನಂದನ್‌ ಅವರು ಜಮ್ಮು ವಾಯು ನೆಲೆಗೆ ಭೇಟಿ ನೀಡಿದ್ದಾರೆ ಎನ್ನಲಾಗಿದೆ. ಅಲ್ಲಿ ಸಹೋದ್ಯೋಗಿಗಳು ಅಭಿನಂದನ್‌ ಅವರೊಂದಿಗೆ ಸೆಲ್ಫಿ ತೆಗೆದುಕೊಂಡು ಅಭಿಮಾನ ಮೆರೆದಿದ್ದಾರೆ. ಅಭಿನಂದನ್‌ ಅವರೂ ಸಂಭ್ರಮದಿಂದ ಸಹೋದ್ಯೋಗಿಗಳೊಂದಿಗೆ ಸೆಲ್ಫಿಗೆ ನಿಲ್ಲುತ್ತಾರೆ. ನಂತರ ಸೈನಿಕರೆಲ್ಲರೂ ಭಾರತ ಮಾತೆಗೆ ಜೈಕಾರ ಕೂಗುತ್ತಾರೆ.

ಈ ವೇಳೆ ಸಹೋದ್ಯೋಗಿಯೊಬ್ಬರು ವಿಡಿಯೊ ಮಾಡಿದ್ದಾರೆ. ಸುದ್ದಿ ಸಂಸ್ಥೆ ಎಎನ್‌ಐ ಈ ವಿಡಿಯೊವನ್ನು ಟ್ವೀಟ್‌ ಮಾಡಿದ್ದು, ವಿಡಿಯೊ  ವೈರಲ್‌ ಆಗಿದೆ.

ಇರ್ತಾರಾ ಮೋದಿ? ಬರ್ತಾರಾ ರಾಹುಲ್?

ಲೋಕಸಭೆ ಫಲಿತಾಂಶಕ್ಕಾಗಿ ವಿಶ್ವವೇ ಬೆರಗುಗಣ್ಣಿನಿಂದ ಕಾಯುತ್ತಿದೆ. ನರೇಂದ್ರ ಮೋದಿ ಗೆಲ್ತಾರಾ? ರಾಹುಲ್‌ ಗಾಂಧಿ ಬರ್ತಾರಾ? ರಾಜಕಾರಣದ ಕ್ಷಣಕ್ಷಣದ ಮಾಹಿತಿ, ತಾಜಾ ಅಪ್‌ಡೇಟ್‌ಗಳಿಗಾಗಿ www.prajavani.net/prajamatha ನೋಡಿ.

ಫೇಸ್‌ಬುಕ್‌ನಲ್ಲಿ ನಮ್ಮನ್ನು ಲೈಕ್ ಮಾಡಿ ಅಥವಾ ಟ್ವಿಟರ್, ಯೂಟ್ಯೂಬ್, ಇನ್‌ಸ್ಟಾಗ್ರಾಂನಲ್ಲಿ ಫಾಲೊ ಮಾಡಿ.

ತ್ವರಿತ ಸುದ್ದಿ, ನಿಖರ ವಿಶ್ಲೇಷಣೆಗೆ www.prajavani.net ಓದಿ. 'ಪ್ರಜಾವಾಣಿ' ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

 • 1

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !