ಸೋಮವಾರ, ಸೆಪ್ಟೆಂಬರ್ 20, 2021
21 °C

ಬಸ್‌– ಜೀಪ್‌ ಡಿಕ್ಕಿ 14 ಸಾವು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಅಮರಾವತಿ: ಹೈದರಾಬಾದ್‌ನಿಂದ ಬೆಂಗಳೂರಿಗೆ ಬರುತ್ತಿದ್ದ ಖಾಸಗಿ ಬಸ್‌ ಕರ್ನೂಲ್‌ ಬಳಿ ಜೀಪ್‌ವೊಂದಕ್ಕೆ ಶನಿವಾರ ಡಿಕ್ಕಿ ಹೊಡೆದ ಪರಿಣಾಮ, ಜೀಪ್‌ನಲ್ಲಿದ್ದವರ ಪೈಕಿ 14 ಜನರು ಮೃತಪಟ್ಟಿದ್ದಾರೆ. ಗಾಯಗೊಂಡಿರುವ ಆರು ಜನರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಡಿಕ್ಕಿ ರಭಸಕ್ಕೆ, ಜೀಪ್‌ನಲ್ಲಿದ್ದವರ ಪೈಕಿ 10 ಜನರು ಸ್ಥಳದಲ್ಲಿಯೇ ಮೃತಪಟ್ಟರೆ, ನಾಲ್ವರು ಚಿಕಿತ್ಸೆ ಫಲಕಾರಿಯಾಗದೇ ಆಸ್ಪತ್ರೆಯಲ್ಲಿ ನಿಧನರಾದರು. ಮೃತರೆಲ್ಲರೂ ಸಂಬಂಧಿಗಳೇ ಆಗಿದ್ದು, ಗದ್ವಾಲ್‌ ಜಿಲ್ಲೆಯ ರಾಮಾವರಂ ಗ್ರಾಮದವರು. ಬಸ್‌ನಲ್ಲಿದ್ದ ಕೆಲವು ಪ್ರಯಾಣಿಕರಿಗೂ ಗಾಯಗಳಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು