ಸೋಮವಾರ, ಅಕ್ಟೋಬರ್ 21, 2019
22 °C

ಅಪಘಾತ 3 ಸಾವು: ನನ್ನ ಕಾರು ಬೈಕ್‌ಗೆ ಡಿಕ್ಕಿ ಹೊಡೆದಿಲ್ಲ–ಬಿಜೆಪಿ ಶಾಸಕ

Published:
Updated:

ಭೋಪಾಲ್: ಮಧ್ಯಪ್ರದೇಶದಲ್ಲಿ ನಡೆದ ಅಪಘಾತ ಪ್ರಕರಣದಲ್ಲಿ ನನ್ನ ಕಾರು ಬೈಕ್‌ಗೆ ಡಿಕ್ಕಿ ಹೊಡೆದಿಲ್ಲ ಎಂದು ಬಿಜೆಪಿ ನಾಯಕಿ ಉಮಾಭಾರತಿ ಅವರ ಸೋದರಳಿಯ ಹಾಗೂ ಬಿಜೆಪಿ ಶಾಸಕ ರಾಹುಲ್ ಸಿಂಗ್ ಲೋಧಿ ತಿಳಿಸಿದ್ದಾರೆ.

ಮಧ್ಯಪ್ರದೇಶದ ತಿಕಮ್‌ಗಢ-ಚತ್ತಾರಪುರ ಮಾರ್ಗದಲ್ಲಿ ಸೋಮವಾರ ಅಪಘಾತ ನಡೆದಿದ್ದು ಬೈಕ್‌ನಲ್ಲಿ ತೆರಳುತ್ತಿದ್ದ ಮೂವರು  ಮೃತಪಟ್ಟಿದ್ದರು. ತಿಕಮ್‌ಗಢ ಜಿಲ್ಲೆಯ ಖರಗಾಪುರ ವಿಧಾನಸಭೆ ಕ್ಷೇತ್ರದ ಶಾಸಕರಾಗಿರುವ ರಾಹುಲ್ ಸಿಂಗ್ ಲೋಧಿ ಅವರ ಕಾರು ಬೈಕ್‌ಗೆ ಡಿಕ್ಕಿ ಹೊಡೆದಿದೆ ಎಂದು ವರದಿಯಾಗಿತ್ತು.

ಘಟನೆ ಕುರಿತಂತೆ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿರುವ ರಾಹುಲ್ ಸಿಂಗ್ ಲೋಧಿ ಈ ಅಪಘಾತಕ್ಕೂ ನನ್ನ ಕಾರಿಗೂ ಯಾವುದೇ ಸಂಬಂಧ ಇಲ್ಲ, ನಾನು ಸೋಮವಾರ ಇಡೀ ದಿನ ಫುತೇರ್‌ನಲ್ಲಿ ಇದ್ದೆ ಎಂದು ಹೇಳಿದ್ದಾರೆ. ನನ್ನ ಕಾರು ಬೈಕಿಗೆ ಗುದ್ದಿಲ್ಲ, ಎರಡು ಆಟೊಗಳು ಮತ್ತು ಬೈಕ್‌ ನಡುವೆ ಈ ಅಪಘಾತ ಸಂಭವಿಸಿದೆ ಎಂದು ನಮ್ಮ ಕಾರು ಚಾಲಕ ತಿಳಿಸಿದ್ದಾನೆ ಎಂದು ರಾಹುಲ್ ಸಿಂಗ್ ಮಾಹಿತಿ ನೀಡಿದ್ದಾರೆ. ಅಪಘಾತದಲ್ಲಿ ಮೃತಪಟ್ಟವರು ನಮ್ಮ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯವರಾಗಿದ್ದು ಅವರ ಕುಟುಂಬ ವರ್ಗದವರನ್ನು ಶೀಘ್ರದಲ್ಲೇ ಭೇಟಿ ಮಾಡಿ ಸಾಂತ್ವನ ಹೇಳುವುದಾಗಿ ತಿಳಿಸಿದ್ದಾರೆ. 

ಘಟನೆ ಕುರಿತಂತೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು ತನಿಖೆ ನಡೆಸುತ್ತಿದ್ದಾರೆ. 

ಚುನಾವಣಾ ಫಲಿತಾಂಶ 2019 | ಹರಿಯಾಣ ಮತ್ತು ಮಹಾರಾಷ್ಟ್ರ ವಿಧಾನಸಭೆ 2019 ಚುನಾವಣೆಗೆ ಸಂಬಂಧಿಸಿದ ಸಮಗ್ರ ಸುದ್ದಿ, ಮಾಹಿತಿ, ವಿಶ್ಲೇಷಣೆ ಇಲ್ಲಿ ಲಭ್ಯ.

ಮಹಾರಾಷ್ಟ್ರ ವಿಧಾನಸಭೆಯ ಫಲಿತಾಂಶಕ್ಕಾಗಿ ಇಲ್ಲಿ ಕ್ಲಿಕ್ ಮಾಡಿ

ಹರಿಯಾಣ ವಿಧಾನಸಭೆಯ ಫಲಿತಾಂಶಕ್ಕಾಗಿ ಇಲ್ಲಿ ಕ್ಲಿಕ್ ಮಾಡಿ

Post Comments (+)