ಬುಧವಾರ, ಜನವರಿ 22, 2020
25 °C

ಬಾಲಕಿ ಮೇಲೆ ಅತ್ಯಾಚಾರ: ಯುವಕನ ಬಂಧನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಕೋಟ್ಟಯಂ, ಕೇರಳ: ಹದಿಮೂರು ವರ್ಷದ ಬಾಲಕಿ ಮೇಲೆ ಅತ್ಯಾಚಾರ ಎಸಗಿದ ಆರೋಪದಲ್ಲಿ ಯುವಕನೊಬ್ಬನನ್ನು ಪೊಲೀಸರು ಶನಿವಾರ ಬಂಧಿಸಿದ್ದಾರೆ.

ಇಲ್ಲಿನ ಕರಿಂಬುಕಾಯಂ ನಿವಾಸಿ ಅರುಣ್‌ ಸುರೇಶ್‌ ಬಂಧಿತ ಆರೋಪಿ. ಸೈಬರ್‌ ವಿಭಾಗದ ಪೊಲೀಸರ ಸಹಾಯದಿಂದ ಆರೋಪಿ ಇದ್ದ ಸ್ಥಳವನ್ನು ಪತ್ತೆ ಹಚ್ಚಿ ಆತನನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಕುಡಿಯಲು ನೀರು ಬೇಕೆಂದು ಕೇಳಿ ಬಾಲಕಿಯ ಮನೆಗೆ ತೆರಳಿದ್ದ ಆರೋಪಿ ಆಕೆಯ ಮೇಲೆ ಅತ್ಯಾಚಾರ ಎಸಗಿದ್ದಾನೆ ಎಂದಿದ್ದಾರೆ.

‘ಮನೆಯಲ್ಲಿ ಯಾರೂ ಇಲ್ಲದ್ದನ್ನು ಗಮನಿಸಿದ ಆರೋಪಿ, ಬಾಲಕಿಯ ಸಹೋದರನ ಸ್ನೇಹಿತನೆಂದು ಪರಿಚಯಿಸಿಕೊಂಡಿದ್ದ’ ಎಂದೂ ತಿಳಿಸಿದ್ದಾರೆ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು