ಬುಧವಾರ, ಮೇ 19, 2021
21 °C

ವರವರರಾವ್ ಆಸ್ಪತ್ರೆಗೆ ದಾಖಲು: ಜಾಮೀನು ಕೋರಿದ ಕುಟುಂಬ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ಹೈದರಾಬಾದ್: ‘ಎಲ್ಗರ್ ಪರಿಷತ್ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ಸಾಮಾಜಿಕ ಕಾರ್ಯಕರ್ತ ವರವರ ರಾವ್, ಅವರನ್ನು ಮುಂಬೈನ ಆಸ್ಪತ್ರೆಗೆ ದಾಖಲಿಸಲಾಗಿದೆ’ ಎಂದು ಪೊಲೀಸರು ತಿಳಿಸಿದ್ದಾರೆ.

ವರವರ ರಾವ್ ಅವರನ್ನು ತಕ್ಷಣವೇ ಜಾಮೀನಿನ ಮೇಲೆ ಬಿಡುಗಡೆ ಮಾಡಬೇಕೆಂದು ರಾವ್ ಕುಟುಂಬ ಶನಿವಾರ ಒತ್ತಾಯಿಸಿದೆ.

‘ವರವರ ರಾವ್ ಅವರನ್ನು ಮುಂಬೈನ ಜೆ.ಜೆ. ಆಸ್ಪ್ರತ್ರೆ ದಾಖಲಿಸಲಾಗಿದೆ. ಈ ವಿಷಯವನ್ನು ಅವರ ಕುಟುಂಬದ ಸದಸ್ಯರಿಗೆ ತಿಳಿಸಲಾಗಿದ್ದು, ಮುಂಬೈಗೆ ಬರಲು ಅವರ ಕುಟುಂಬಕ್ಕೆ ಪಾಸ್‌ಗಳನ್ನು ನೀಡಲಾಗುವುದು. ಈ ಬಗ್ಗೆ ಮುಂಬೈನ ಏಜೆನ್ಸಿಯೊಂದಿಗೆ ಕಾರ್ಯನಿರತರಾಗಿದ್ದೇವೆ’ ಎಂದು ಹೈದರಾಬಾದ್‌ನ ಪೊಲೀಸ್ ಆಯುಕ್ತ ಅಂಜನಿ ಕುಮಾರ್ ಟ್ವೀಟ್ ಮಾಡಿದ್ದಾರೆ.

‘ಕೋವಿಡ್‌–19 ಹಿನ್ನೆಲೆಯಲ್ಲಿ ಸರ್ಕಾರ ನಮಗೆ ಕಾನೂನು ಪ್ರಕಾರ ಅನುಮತಿ ನೀಡಿದರೆ ಸಾಕು, ನಾವೇ ವ್ಯವಸ್ಥೆ ಮಾಡಿಕೊಂಡು ಮುಂಬೈಗೆ ಹೋಗುತ್ತೇವೆ. ರಾವ್ ಅವರ ಆರೋಗ್ಯ ಸ್ಥಿತಿಯನ್ನು ಅರಿಯಲು ಕುಟುಂಬಕ್ಕೆ ತಕ್ಷಣವೇ ವಿಡಿಯೊ ಕಾನ್ಫರೆನ್ಸ್ ವ್ಯವಸ್ಥೆ ಮಾಡಬೇಕು ಎಂದು’  ಕೇಂದ್ರ ಸರ್ಕಾರ, ಮಹಾರಾಷ್ಟ್ರ ಮತ್ತು ತೆಲಂಗಾಣ ಸರ್ಕಾರಕ್ಕೆ ಮನವಿ ವರವರ ರಾವ್ ಅವರ ಪತ್ನಿ ಹೇಮಲತಾ ಮನವಿ ಮಾಡಿದ್ದಾರೆ. 

‘ಕಟ್ಟುಕಥೆಯ ಆರೋಪ ಮತ್ತು ವಿಚಾರಣೆ ಇಲ್ಲದೆಯೇ ರಾವ್ ಈಗಾಗಲೇ 18 ತಿಂಗಳ ಜೈಲುವಾಸ ಅನುಭವಿಸಿದ್ದಾರೆ. ಅವರನ್ನು ತಕ್ಷಣವೇ ಜಾಮೀನು ಮೇಲೆ ಬಿಡುಗಡೆ ಮಾಡಬೇಕು. ಅವರಿಗೆ ಹೃದಯಕ್ಕೆ ಸಂಬಂಧಿಸಿದ ಕಾಯಿಲೆ ಮತ್ತು ಅಧಿಕ ರಕ್ತದೊತ್ತಡವಿದೆ. ತಕ್ಷಣವೇ ಅವರಿಗೆ ಸಂಪೂರ್ಣ ವೈದ್ಯಕೀಯ ಪರೀಕ್ಷೆ ನಡೆಸಬೇಕು’ ಎಂದೂ ಅವರು ಒತ್ತಾಯಿಸಿದ್ದಾರೆ. 

‘ರಾವ್ ಮತ್ತು ಇತರ ಸಹ ಆರೋಪಿಗಳ ಬಗ್ಗೆ ಪ್ರತೀಕಾರದ ಮನೋಭಾವ ಕೈಬಿಡುವಂತೆ ಕೇಂದ್ರ ಗೃಹ ಸಚಿವಾಲಯ ಎನ್ಐಎಗೆ ನಿರ್ದೇಶನ ನೀಡಬೇಕು’ ಎಂದು ಅವರು ಕೋರಿದ್ದಾರೆ. 

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು