ಸೋಮವಾರ, ಫೆಬ್ರವರಿ 17, 2020
22 °C

ದೆಹಲಿ: ಹೆಚ್ಚುವರಿ ಪೊಲೀಸ್ ಆಯುಕ್ತ, ಚುನಾವಣಾಧಿಕಾರಿಯಿಂದ ಪರಿಶೀಲನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ನವದೆಹಲಿ: ದೆಹಲಿಯ ಹೆಚ್ಚುವರಿ ಪೊಲೀಸ್ ಆಯುಕ್ತ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಜಂಟಿಯಾಗಿ ಜಾಮಾ ಮಸೀದಿ ಪ್ರದೇಶಕ್ಕೆ ಸೋಮವಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಚುನಾವಣಾಧಿಕಾರಿ ನಿಧಿ ಶ್ರೀವಾತ್ಸವ, ಹೆಚ್ಚುವರಿ ಪೊಲೀಸ್ ಆಯುಕ್ತ ಎಂ.ಎಸ್.ರಾಂಧವ ಭೇಟಿ ನೀಡಿ ಪ್ರಕ್ಷುಬ್ಧ ಪೀಡಿತ ಪ್ರದೇಶಗಳ ಜನರನ್ನು ಮಾತನಾಡಿಸಿದರು.

ಈ ಸಂಬಂಧ ಹೆಚ್ಚುವರಿ ಪೊಲೀಸ್ ಆಯುಕ್ತ ಎಂ.ಎಸ್.ರಾಂಧವ ಮಾಧ್ಯಮಗಳೊಂದಿಗೆ ಮಾತನಾಡಿ, ನಮ್ಮಿಬ್ಬರ ಈ ಭೇಟಿ ಸಾರ್ವಜನಿಕರಲ್ಲಿ ಆತ್ಮವಿಶ್ವಾಸ ತುಂಬುವುದಾಗಿದೆ. ಇದರೊಂದಿಗೆ ಪರಿಸ್ಥಿತಿಯನ್ನು ಅವಲೋಕಿಸಿ ಯಾವ ಕಡೆ ಪೊಲೀಸ್ ಭದ್ರತೆಯನ್ನು ಹೆಚ್ಚಿಸಬೇಕು. ಯಾವ ಕಡೆ ಭದ್ರತೆಯನ್ನು ಕಡಿಮೆ ಮಾಡಬೇಕು ಎಂಬುದನ್ನು ನಿರ್ಧರಿಸುವುದೇ ಪ್ರಮುಖ ಉದ್ದೇಶವಾಗಿದೆ ಎಂದು ತಿಳಿಸಿದರು.

ಸೋಮವಾರ ಬೆಳಿಗ್ಗೆ ಶಾಹೀನ್ ಬಾಗ್ ಪ್ರದೇಶಗಳಿಗೆ ಹೆಚ್ಚಿನ ಪೊಲೀಸ್ ತುಕಡಿಗಳನ್ನು ನಿಯೋಜಿಸಲಾಗಿದ್ದು, ಪರಿಸ್ಥಿತಿ ಪ್ರಕ್ಷುಬ್ಧತೆಯಿಂದ ಕೂಡಿದೆ. ಚುನಾವಣಾ ಹಿನ್ನೆಲೆಯಲ್ಲಿ ಪೊಲೀಸರು ಈ ಪ್ರದೇಶವನ್ನು ಅತ್ಯಂತ ಸೂಕ್ಷ್ಮ ಪ್ರದೇಶವನ್ನು ಪರಿಗಣಿಸಿದ್ದು, ವಿಶೇಷ ಭದ್ರತೆ ಕೈಗೊಂಡಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು