ಬುಧವಾರ, ಆಗಸ್ಟ್ 21, 2019
22 °C

ತೀವ್ರ ಜ್ವರ ಇದ್ದರೂ ಮನೆಯಲ್ಲೇ ಧ್ವಜಾರೋಹಣ ಮಾಡಿದ ಅಡ್ವಾಣಿ

Published:
Updated:

ನವದೆಹಲಿ: ಬಿಜೆಪಿಯ ಹಿರಿಯ ಧುರೀಣ ಎಲ್.ಕೆ.ಅಡ್ವಾಣಿ ಗುರುವಾರ ತೀವ್ರ ಜ್ವರದ ನಡುವೆಯೂ ತಮ್ಮ ಮನೆಯಲ್ಲಿ ಧ್ವಜಾರೋಹಣ ಮಾಡುವ ಮೂಲಕ ತಾವು ಆಚರಿಸಿಕೊಂಡು ಬರುತ್ತಿದ್ದ ಸಂಪ್ರದಾಯ ಪಾಲಿಸಿದರು. ಆದರೆ, ಇದೇ ಮೊದಲ ಬಾರಿಗೆ ಕೆಂಪುಕೋಟೆಯಲ್ಲಿ ನಡೆಯುವ ಸಮಾರಂಭಕ್ಕೆ ಹಾಜರಾಗಲಿಲ್ಲ.

91 ವರ್ಷ ವಯಸ್ಸಿನ ಅವರು ಮನೆಯಲ್ಲಿ ಧ್ವಜಾರೋಹಣದ ಬಳಿಕ ಕೆಂಪುಕೋಟೆಯಲ್ಲಿ ಪ್ರಧಾನಿ ಪಾಲ್ಗೊಳ್ಳುವ ಸಮಾರಂಭದಲ್ಲಿ ಭಾಗವಹಿಸುವ ಸಂಪ್ರದಾಯವನ್ನು ದಶಕಗಳಿಂದ ಪಾಲಿಸಿಕೊಂಡು ಬಂದಿದ್ದರು.

‘ಜ್ವರದಿಂದ ಬಳಲುತ್ತಿದ್ದು, ಸ್ವಲ್ಪಮಟ್ಟಿಗೆ ಚೇತರಿಸಿಕೊಂಡ ಹಿನ್ನೆಲೆಯಲ್ಲಿ ಧ್ವಜಾರೋಹಣ ಮಾಡಿದರು’ ಎಂದು ಕುಟುಂಬದ ಸದಸ್ಯರು ತಿಳಿಸಿದರು.

Post Comments (+)