ಪಟ್ನಾ: ‘ರಾಜ್ಯದ ಮೈತ್ರಿ ಸರ್ಕಾರದಲ್ಲಿ ಎಲ್ಲವೂ ಸರಿಯಾಗಿದೆ’ ಎಂದು ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ತಿಳಿಸಿದ್ದಾರೆ.

ಬಿಜೆಪಿ ಸರ್ಕಾರದೊಂದಿಗಿನ ಭಿನ್ನಮತದ ಕುರಿತಾದ ಊಹಾಪೋಹಗಳ ಕುರಿತು ಸ್ಪಷನೆ ನೀಡಿದ ಅವರು, ‘ಮೈತ್ರಿ ಸರ್ಕಾರದಲ್ಲಿ ಯಾವುದೇ ಸಮಸ್ಯೆಯಿಲ್ಲ’ ಎಂದು ಪ್ರತಿಪಾದಿಸಿದರು.

ಜೆಡಿಯು ಉಪಾಧ್ಯಕ್ಷ ಪ್ರಶಾಂತ್ ಕಿಶೋರ್ ಅವರು ಸಂದರ್ಶನವೊಂದರಲ್ಲಿ, ಜೆಡಿಯು ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿಗಿಂತ ಹೆಚ್ಚಿನ ಸ್ಥಾನಗಳಲ್ಲಿ ಸ್ಪರ್ಧಿಸಲಿದೆ ಎಂದು ಹೇಳಿದ್ದು, ಗೊಂದಲಕ್ಕೆ ಕಾರಣವಾಗಿತ್ತು.

ಇದನ್ನೂ ಓದಿ:ಬಿಹಾರ ಚುನಾವಣೆಯಲ್ಲಿ ಬಿಜೆಪಿಗಿಂತ ಹೆಚ್ಚು ಸ್ಥಾನದಲ್ಲಿ ಸ್ಪರ್ಧಿಸಲಿದೆ ಜೆಡಿಯು

ಈ ಕುರಿತು ಪ್ರತಿಕ್ರಿಯಿಸಿದ ಮುಖ್ಯಮಂತ್ರಿ ನಿತೀಶ್,ಬಿಜೆಪಿ ಮುಖಂಡ ಸುಶೀಲ್ ಕುಮಾರ್ ಮೋದಿ ಸೋಮವಾರ ನೀಡಿದ ಹೇಳಿಕೆಗೆಪ್ರಶಾಂತ್ ಕಿಶೋರ್ ಪ್ರತಿಹೇಳಿಕೆ ನೀಡಿದ್ದಾರೆ ಎಂದು ಸ್ಪಷ್ಟಪಡಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.