ಮಂಗಳವಾರ, 19 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಧೀರ್‌ ರಂಜನ್‌ ಚೌಧರಿ ಕಾಂಗ್ರೆಸ್‌ ಸಂಸದೀಯ ಪಕ್ಷದ ನಾಯಕ 

Last Updated 18 ಜೂನ್ 2019, 12:01 IST
ಅಕ್ಷರ ಗಾತ್ರ

ನವದೆಹಲಿ:ಲೋಕಸಭೆಯಲ್ಲಿ ಕಾಂಗ್ರೆಸ್‌ನ ಸಂಸದೀಯ ಪಕ್ಷದ ನಾಯಕರಾಗಿ ಹಿರಿಯ ನಾಯಕ, ಸಂಸದ ಅಧೀರ್‌ ರಂಜನ್‌ ಚೌಧರಿ ಅವರು ಮಂಗಳವಾರ ಆಯ್ಕೆಯಾಗಿದ್ದಾರೆ.

ಲೋಕಸಭೆಯಲ್ಲಿ ಸಂಸದೀಯ ಪಕ್ಷದ ನಾಯಕನನ್ನು ಆರಿಸಿಕೊಳ್ಳುವ ಸಲುವಾಗಿಯೇ ದೆಹಲಿಯಲ್ಲಿ ಯುಪಿಎ ಅಧ್ಯಕ್ಷೆ ಸೋನಿಯಾ ಗಾಂಧಿ, ರಾಹುಲ್‌ ಗಾಂಧಿ ಅವರೂ ಸೇರಿದಂತೆ ಹಲವು ನಾಯಕರು ಮಂಗಳವಾರ ಸುದೀರ್ಘ ಚರ್ಚೆ ನಡೆಸಿದರು. ಈ ಸಭೆಯಲ್ಲಿ ರಂಜನ್‌ ಚೌಧರಿವರನ್ನು ಪಕ್ಷ ಆರಿಸಿಕೊಂಡಿದೆ. ಆಯ್ಕೆ ಕುರಿತು ಲೋಕಸಭೆಗೆ ಕಾಂಗ್ರೆಸ್‌ ಪತ್ರವನ್ನೂ ರವಾನಿಸಿದೆ.

ಪಶ್ಚಿಮ ಬಂಗಾಳದಬೆರ್ಹಮ್‌ಪೊರ್‌ ಕ್ಷೇತ್ರದಿಂದ ಐದು ಬಾರಿ ಲೋಕಸಭೆಗೆ ಆಯ್ಕೆಯಾಗಿರುವ ಅಧೀರ್‌ ರಂಜನ್‌ ಚೌಧರಿ ಅವರು, ಉತ್ತಮಸಂಸದೀಯ ಪಟುವೆನಿಸಿಕೊಂಡಿದ್ದಾರೆ.ಅವರು ಪಶ್ಚಿಮ ಬಂಗಾಳದ ಕಾಂಗ್ರೆಸ್‌ ಅಧ್ಯಕ್ಷರೂ ಆಗಿದ್ದರು.

ಲೋಕಸಭೆಯ ಈ ಮಹತ್ವದ ಸ್ಥಾನವನ್ನು ವಹಿಸಿಕೊಳ್ಳಲು ರಾಹುಲ್‌ ಗಾಂಧಿ ಅವರು ನಿರಾಕರಿಸಿದ ಹಿನ್ನೆಲೆಯಲ್ಲಿ ಹಲವು ಸುತ್ತಿನ ಚರ್ಚೆಗಳ ನಂತರ ರಂಜನ್‌ ಚೌಧರಿ ಅವರನ್ನು ಆಯ್ಕೆ ಮಾಡಲಾಗಿದೆ. ದೀರ್ಘ ಇತಿಹಾಸ ಹೊಂದಿರುವಪಕ್ಷವೆಂದೇ ಕರೆಸಿಕೊಳ್ಳುವ ಕಾಂಗ್ರೆಸ್‌ ಅಧಿವೇಶನ ಆರಂಭವಾಗಿದ್ದರೂ, ತನ್ನ ಸಂಸದೀಯ ಪಕ್ಷದ ನಾಯಕನನ್ನು ಆರಿಸಿಕೊಳ್ಳುವಲ್ಲಿ ವಿಳಂಬ ಮಾಡಿಕೊಂಡಿತ್ತು.

ಇದೇ ವೇಳೆ, ‘ಒಂದು ದೇಶ ಒಂದು ಚುನಾವಣೆ’ಯ ಕುರಿತು ಚರ್ಚಿಸಲುಬುಧವಾರ ಪ್ರಧಾನಿ ಮೋದಿ ನೇತೃತ್ವದಲ್ಲಿ ಬುಧವಾರ ಸಭೆ ಕರೆಯಲಾಗಿದೆ. ಈ ಸಭೆಯಲ್ಲಿ ಮಂಡಿಸಬೇಕಾದ ವಿಷಯಗಳ ಕುರಿತು ಕಾಂಗ್ರೆಸ್‌ ಗಂಭೀರವಾಗಿ ಚರ್ಚೆ ನಡೆಸಿದೆ. ‘ಒಂದು ದೇಶ ಒಂದುಚುನಾವಣೆ’ ಪ್ರಸ್ತಾವವನ್ನು ಕಾಂಗ್ರೆಸ್‌ ವಿರೋಧಿಸಿಕೊಂಡೇ ಬಂದಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT