ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹೆಚ್ಚಿನ ಸಂಖ್ಯೆಯ ನೋಂದಣಿ ಪರಿಣಾಮ ವಿಮಾನಯಾನ ಸಚಿವಾಲಯ ವೆಬ್‌ಸೈಟ್‌ ಸ್ಥಗಿತ

ಭಾರತಕ್ಕೆ ಮರಳುವವರಿಂದ ಭಾರಿ ಪ್ರತಿಕ್ರಿಯೆ
Last Updated 6 ಮೇ 2020, 12:04 IST
ಅಕ್ಷರ ಗಾತ್ರ

ನವದೆಹಲಿ: ವಿವಿಧ ದೇಶಗಳಲ್ಲಿ ಸಿಲುಕಿರುವ ಭಾರತೀಯರನ್ನು ತಾಯ್ನಾಡಿಗೆ ಕರೆತರಲು ವಿಶೇಷ ವಿಮಾನಗಳ ವ್ಯವಸ್ಥೆ ಮಾಡಿರುವ ಬಗ್ಗೆ ಘೋಷಿಸಿದ ಬೆನ್ನಲ್ಲೇ, ಭಾರಿ ಪ್ರಮಾಣದ ನೋಂದಣಿಯಿಂದಾಗಿ ನಾಗರಿಕ ವಿಮಾನಯಾನ ಸಚಿವಾಲಯದ ವೆಬ್‌ಸೈಟ್ ಸ್ಥಗಿತಗೊಂಡ ಘಟನೆ ಬುಧವಾರ ನಡೆಯಿತು.

‘ತಾಯ್ನಾಡಿಗೆ ಮರಳಲು ತುದಿಗಾಲಲ್ಲಿ ನಿಂತಿರುವ ಭಾರತೀಯರು ಭಾರಿ ಸಂಖ್ಯೆಯಲ್ಲಿ ನೋಂದಾಯಿಸಿದ್ದರಿಂದ ದಟ್ಟಣೆ ಹೆಚ್ಚಿ, ವೆಬ್‌ಸೈಟ್‌ನ ಕಾರ್ಯ ಸ್ಥಗಿತಗೊಂಡಿತು. ಎನ್‌ಐಸಿ ತಂಡ ವೆಬ್‌ಸೈಟ್‌ನ ಮರುಸ್ಥಾಪನೆಗೆ ಶ್ರಮಿಸುತ್ತಿದೆ’ ಎಂದು ಸಚಿವಾಲಯ ಟ್ವೀಟ್‌ ಮಾಡಿದೆ.

12 ದೇಶಗಳಲ್ಲಿ 15,000ಕ್ಕೂ ಅಧಿಕ ಜನರು ಸಿಲುಕಿಕೊಂಡಿದ್ದಾರೆ. ಇವರನ್ನು ಕರೆತರಲು ಮೇ 7 ರಿಂದ 13ವರೆಗಿನ ಅವಧಿಯಲ್ಲಿ ಒಟ್ಟು 64 ವಿಮಾನಗಳು ಕಾರ್ಯಾಚರಿಸಲಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT