ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಆಗ್ರಾ ಜೈಲಿನಲ್ಲಿ 10 ಕೈದಿಗಳಿಗೆ ಕೊರೊನಾ ವೈರಸ್‌ ಸೋಂಕು ದೃಢ

Last Updated 13 ಮೇ 2020, 6:04 IST
ಅಕ್ಷರ ಗಾತ್ರ

ಲಖನೌ: ಆಗ್ರಾ ಕೇಂದ್ರ ಕಾರಾಗೃಹದ 10 ಕೈದಿಗಳಿಗೆ ಕೊರೊನಾ ವೈರಸ್‌ ಸೋಂಕು ದೃಢಪಟ್ಟಿದೆ ಎಂದು ಆಗ್ರಾ ಜಿಲ್ಲಾಧಿಕಾರಿ ಪಿ.ಎನ್‌. ಸಿಂಗ್‌ ತಿಳಿಸಿದ್ದಾರೆ.

12 ಕೈದಿಗಳ ಗಂಟಲು ಮಾದರಿಯನ್ನು ಪರೀಕ್ಷೆಗೆ ಕಳುಹಿಸಲಾಗಿತ್ತು. ಇವರಲ್ಲಿ 10 ಕೈದಿಗಳಿಗೆ ಕೋವಿಡ್‌–19 ಸೋಂಕು ದೃಢಪಟ್ಟಿದ್ದು ಅವರನ್ನು ಜೈಲಿನ ಹಿಂಭಾಗದಲ್ಲಿ ಕ್ವಾರಂಟೈನ್‌ ಮಾಡಲಾಗಿದೆ. ಜೈಲಿನಲ್ಲಿರುವ ಎಲ್ಲಾ 1350 ಕೈದಿಗಳಿಗೆ ಹಾಗೂ 112 ಸಿಬ್ಬಂದಿಗಳನ್ನು ಪರೀಕ್ಷೆಗೆ ಒಳಪಡಿಸಲಾಗುವುದು ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.

ಮೇ 6ರಂದು 60 ವರ್ಷದ ಕೈದಿಯೊಬ್ಬರಿಗೆ ಕೋವಿಡ್‌–19 ದೃಢಪಟ್ಟಿತ್ತು. ಕಳೆದ ಶುಕ್ರವಾರ ಆ ಕೈದಿಯನ್ನು ತೀವ್ರ ಅನಾರೋಗ್ಯದ ಕಾರಣ ಎಸ್‌.ಎನ್‌. ಮೆಡಿಕಲ್‌ ಕಾಲೇಜಿಗೆ ದಾಖಲು ಮಾಡಲಾಗಿತ್ತು. ಆದರೆ ಮೆದುಳು ನಿಷ್ಕ್ರೀಯಗೊಂಡು ಆ ವ್ಯಕ್ತಿ ಮೃತಪಟ್ಟರು ಎಂದು ಜೈಲು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಸೋಂಕು ದೃಢಪಟ್ಟಿರುವ ಎಲ್ಲಾ ಕೈದಿಗಳ ಆಪ್ತರು ಮತ್ತು ಅವರ ಸಂಪರ್ಕಕ್ಕೆ ಬಂದಿದ್ದಸಿಬ್ಬಂದಿಗಳನ್ನು ಪರೀಕ್ಷೆಗೆ ಒಳಪಡಿಸಿ ಕ್ವಾರಂಟೈನ್‌ ಮಾಡಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಮಾರ್ಚ್‌ 15ರ ನಂತರ ಜೈಲಿಗೆ ಭೇಟಿ ನೀಡುವವರು ಹಾಗೂ ಕೈದಿಗಳ ಕುಟುಂಬದವರ ಭೇಟಿಯನ್ನು ನಿರ್ಬಂಧಿಸಲಾಗಿತ್ತು. ಆದರೂ ಕೈದಿಗೆ ಸೋಂಕು ತಗುಲಿದ್ದು ಹೇಗೆ ಎಂಬುದು ಸ್ಪಷ್ಟವಾಗಿಲ್ಲ ಈ ಬಗ್ಗೆ ತನಿಖೆ ನಡೆಸಲಾಗುವುದು ಎಂದು ಜೈಲು ಅಧಿಕಾರಿ ವಿ.ಎನ್‌.ಸಿಂಗ್‌ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT