ಮಂಗಳವಾರ, ಡಿಸೆಂಬರ್ 10, 2019
19 °C

ಅಗಸ್ಟಾ ವೆಸ್ಟ್‌ಲ್ಯಾಂಡ್‌ ಹಗರಣ: ಪ್ರತಿಕ್ರಿಯೆಗೆ ಸಿಬಿಐಗೆ ಎರಡು ವಾರ ಕಾಲಾವಕಾಶ

ಪಿಟಿಐ Updated:

ಅಕ್ಷರ ಗಾತ್ರ : | |

ಕ್ರಿಶ್ಚಿಯನ್‌ ಮಿಷೆಲ್‌

ನವದೆಹಲಿ: ಅಗಸ್ಟಾ ವೆಸ್ಟ್‌ಲ್ಯಾಂಡ್‌ ಹೆಲಿಕಾಪ್ಟರ್‌ ಖರೀದಿ ಹಗರಣಕ್ಕೆ ಸಂಬಂಧಿಸಿದಂತೆ ಶಂಕಿತ ಮಧ್ಯವರ್ತಿ ಕ್ರಿಶ್ಚಿಯನ್‌ ಮಿಷೆಲ್‌ ಜಾಮೀನು ಅರ್ಜಿಯ ಕುರಿತು ಪ್ರತಿಕ್ರಿಯೆ ಸಲ್ಲಿಸಲು ಸಿಬಿಐಗೆ ದೆಹಲಿ ಹೈಕೋರ್ಟ್‌ ಎರಡು ವಾರಗಳ ಕಾಲಾವಕಾಶ ನೀಡಿದೆ.

ಪ್ರಕರಣದ ಮುಂದಿನ ವಿಚಾರಣೆ ನವೆಂಬರ್‌ 29ರಂದು ನಡೆಯಲಿದ್ದು, ಇದರೊಳಗೆ ಪ್ರತಿಕ್ರಿಯೆ ಸಲ್ಲಿಸುವಂತೆ ನ್ಯಾಯಮೂರ್ತಿ ಅನು ಮಲ್ಹೋತ್ರಾ ಸೂಚಿಸಿದ್ದಾರೆ.

ಹಗರಣಕ್ಕೆ ಸಂಬಂಧಿಸಿದಂತೆ ಶೀಘ್ರ ಆರೋಪ ಪಟ್ಟಿ ಸಲ್ಲಿಸಲಾಗುವುದು. ಅದರಲ್ಲಿ ಅಧಿಕಾರಿಗಳ ಹೆಸರುಗಳೂ ಒಳಗೊಂಡಿವೆ ಎಂದು ಸಿಬಿಐ ನ್ಯಾಯಾಲಯಕ್ಕೆ ತಿಳಿಸಿದೆ.

ಪ್ರತಿಕ್ರಿಯೆ ಸಲ್ಲಿಸಲು ಕಾಲಾವಕಾಶ ನೀಡಬೇಕು ಎಂದು ಸಿಬಿಐ ನ್ಯಾಯಾಲಯವನ್ನು ಕೋರಿತ್ತು.

ಜನವರಿ 5ರಿಂದ ಮಿಷೆಲ್‌ ನ್ಯಾಯಾಂಗ ಬಂಧನದಲ್ಲಿದ್ದಾರೆ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು