ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಥಯಾತ್ರೆಗೆ ಮುನ್ನ ಪುರಿ ದೇವಾಲಯದ ಪರಿಚಾರಕರೊಬ್ಬರಿಗೆ ಕೋವಿಡ್-19 ಸೋಂಕು ದೃಢ

Last Updated 23 ಜೂನ್ 2020, 14:23 IST
ಅಕ್ಷರ ಗಾತ್ರ

ಪುರಿ: ಪುರಿ ಶ್ರೀ ಜಗನ್ನಾಥ ದೇವಾಲಯದ ಪರಿಚಾರಕರೊಬ್ಬರಿಗೆ ಕೋವಿಡ್-19 ಸೋಂಕು ಇರುವುದು ದೃಢಪಟ್ಟಿದೆ. ರಥಯಾತ್ರೆ ಆರಂಭಿಸುವ ಮುನ್ನ ಅಲ್ಲಿನ ಅರ್ಚಕರು ಮತ್ತು ಪೊಲೀಸ್ ಸಿಬ್ಬಂದಿಗಳನ್ನು ಕೋವಿಡ್ ಪರೀಕ್ಷೆಗೊಳಪಡಿಸಲಾಗಿದೆ ಎಂದು ಹಿರಿಯ ಅಧಿಕಾರಿಯೊಬ್ಬರು ಹೇಳಿದ್ದಾರೆ.

ಆದಾಗ್ಯೂ, ರಥಯಾತ್ರೆಗಿಂತ ಮುನ್ನ ನಡೆದ ತಪಾಸಣೆ ವೇಳೆ ಸೋಂಕು ಪತ್ತೆಯಾಗಿದ್ದು, ಸೋಂಕಿತ ವ್ಯಕ್ತಿ ರಥಯಾತ್ರೆಯಲ್ಲಿ ಭಾಗವಹಿಸುವುದಿಲ್ಲ ಎಂದು ಅವರು ಹೇಳಿದ್ದಾರೆ.

ಸುಪ್ರೀಂಕೋರ್ಟ್ ನಿರ್ದೇಶನದ ಪ್ರಕಾರ ಸೋಮವಾರ ರಾತ್ರಿ 1,143 ಪರಿಚಾರಕರ ಮಾದರಿಗಳನ್ನು ಪರೀಕ್ಷೆಗೊಳಪಡಿಸಲಾಗಿತ್ತು.

ಇದನ್ನೂ ಓದಿ:ಕೋವಿಡ್‌ ನಿಯಮಗಳಿಗೆ ಒಳಪಟ್ಟು ಐತಿಹಾಸಿಕ ಪುರಿ ಜಗನ್ನಾಥ ಯಾತ್ರೆ ಆರಂಭ!

ಇದರಲ್ಲಿ ಒಬ್ಬ ವ್ಯಕ್ತಿಯನ್ನು ಹೊರತು ಪಡಿಸಿ ಇತರರಿಗೆ ಸೋಂಕು ಇಲ್ಲ ಎಂದು ತಿಳಿದು ಬಂದಿತ್ತು. ಸೋಂಕು ದೃಢಪಟ್ಟಿರುವ ವ್ಯಕ್ತಿಯನ್ನು ಕೋವಿಡ್-19 ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಅಧಿಕಾರಿ ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT