ಸೋಮವಾರ, ಆಗಸ್ಟ್ 2, 2021
26 °C

ಮುಂದಿನ ಐದು ದಿನಗಳಲ್ಲಿ ಗುಜರಾತ್‌ನಲ್ಲಿ ಭಾರಿ ಮಳೆ: ಹವಾಮಾನ ಇಲಾಖೆ ಎಚ್ಚರಿಕೆ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ಅಹಮದಾಬಾದ್‌: ‘ನೈರುತ್ಯ ಮುಂಗಾರು ಗುಜರಾತ್‌ ರಾಜ್ಯವನ್ನು ಪ್ರವೇಶಿಸಿದ್ದು, ಮುಂದಿನ ಐದು ದಿನಗಳಲ್ಲಿ ರಾಜ್ಯದ ದಕ್ಷಿಣ ಭಾಗದಲ್ಲಿ ಭಾರಿ ಮಳೆಯಾಗಲಿದೆ’ ಎಂದು ಹವಾಮಾನ ಇಲಾಖೆ ಭಾನುವಾರ ಹೇಳಿದೆ.

ಜತೆಗೆ, ಮಹಾರಾಷ್ಟ್ರ ಮತ್ತು ಮಧ್ಯ ಪ್ರದೇಶದ ಕೆಲವು ಭಾಗಗಳಲ್ಲೂ ಉತ್ತಮ ಮಳೆಯಾಗಲಿದೆ ಎಂದೂ ಇಲಾಖೆ ಹೇಳಿದೆ.

‘ಅಹಮದಾಬಾದ್‌ನ ಕೆಲವು ಭಾಗಗಳು, ಗಾಂಧಿನಗರ, ವಲಸಾಡ್‌ ಮತ್ತು ಕೇಂದ್ರಾಡಳಿತ ಪ್ರದೇಶಗಳಾದ ದಾದ್ರ ಮತ್ತು ನಗರ್‌ ಹವೇಲಿಯಲ್ಲಿ ಮುಂದಿನ 24 ಗಂಟೆಗಳಲ್ಲಿ ಭಾರಿ ಮಳೆಯಾಗಲಿದೆ. ಗುಜರಾತ್‌ನ ಉತ್ತರ ಭಾಗದ ಕೆಲವು ಪ್ರದೇಶಗಳಲ್ಲೂ ಮಳೆ ಆಗಲಿದೆ’ ಎಂದು ಇಲಾಖೆ ತಿಳಿಸಿದೆ. 

‘ಕೇಂದ್ರ ಗುಜರಾತ್‌ ಮತ್ತು ಸೌರಾಷ್ಟ್ರ–ಕಚ್‌ ಪ್ರದೇಶದಲ್ಲಿ ಗುಡುಗು ಸಹಿತ ಸಾಧಾರಣ ಮಳೆಯಾಗಲಿದೆ’ ಎಂದು ಇಲಾಖೆ ಹೇಳಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು