ಸೋಮವಾರ, ಫೆಬ್ರವರಿ 24, 2020
19 °C

ಎಐಎಡಿಎಂಕೆಯ ಉಚ್ಚಾಟಿತ ಸಂಸದೆ ಬಿಜೆಪಿಗೆ ಸೇರ್ಪಡೆ

ಪಿಟಿಐ Updated:

ಅಕ್ಷರ ಗಾತ್ರ : | |

ನವದೆಹಲಿ: ಎಐಎಡಿಎಂಕೆಯಿಂದ 2016ರಲ್ಲಿ ಉಚ್ಚಾಟನೆಗೊಂಡಿದ್ದ ರಾಜ್ಯಸಭಾ ಸಂಸದೆ, ತಮಿಳುನಾಡಿನ ಶಶಿಕಲಾ ಪುಷ್ಪಾ ಅವರು ಭಾನುವಾರ ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ.

ಪಕ್ಷದ ರಾಷ್ಟ್ರೀಯ ಘಟಕದ ಕಾರ್ಯದರ್ಶಿ ಪಿ. ಮುರಳೀಧರ ರಾವ್‌ ಮತ್ತು ಕೇಂದ್ರದ ಮಾಜಿ ಸಚಿವ ಪೊನ್‌ ರಾಧಾಕೃಷ್ಣನ್‌ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ಶಶಿಕಲಾ ಅವರ ರಾಜ್ಯಸಭಾ ಸದಸ್ಯತ್ವದ ಅವಧಿ ಇನ್ನು ಕೆಲವು ತಿಂಗಳುಗಳಲ್ಲಿ ಪೂರ್ಣಗೊಳ್ಳಲಿದೆ. 2016ರಲ್ಲಿ ಅವರು ಡಿಎಂಕೆ ಸಂಸದರೊಬ್ಬರ ಜತೆ ವಾಗ್ವಾದ ನಡೆಸಿ ಅವರ ಕೆನ್ನೆಗೆ ಹೊಡೆದಿದ್ದ ಆರೋಪ ಎದುರಿಸುತ್ತಿದ್ದರು. ಆ ಬಳಿಕ ಪಕ್ಷದಿಂದ ಅವರನ್ನು ಉಚ್ಚಾಟನೆ ಮಾಡಲಾಗಿತ್ತು.

ಬಿಜೆಪಿ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮುರಳೀಧರ ರಾವ್‌ ಅವರು, ಶಶಿಕಲಾ ಅವರ ಸೇರ್ಪಡೆಯಿಂದಾಗಿ  ಮುಂಬರುವ ತಮಿಳುನಾಡು ಚುನಾವಣೆಯಲ್ಲಿ ಬಿಜೆಪಿಗೆ ಅನುಕೂಲ ಆಗಲಿದೆ ಎಂದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು