ಕಾರು ಅಪಘಾತದಲ್ಲಿ ತಮಿಳುನಾಡಿನ ಶಾಸಕ ರಾಜೇಂದ್ರನ್ ಸಾವು

ಗುರುವಾರ , ಮೇ 23, 2019
32 °C

ಫಲಿತಾಂಶ (ಮುನ್ನಡೆ+ಗೆಲುವು) 0/542LIVE

ಕಾರು ಅಪಘಾತದಲ್ಲಿ ತಮಿಳುನಾಡಿನ ಶಾಸಕ ರಾಜೇಂದ್ರನ್ ಸಾವು

Published:
Updated:

ಚೆನ್ನೈ: ತಮಿಳುನಾಡಿನ ವಿಲ್ಲುಪುರಂ ಎಐಎಡಿಎಂಕೆ ಶಾಸಕ ಎಸ್. ರಾಜೇಂದ್ರನ್ (2) ಕಾರು ಅಪಘಾತದಲ್ಲಿ ಶನಿವಾರ ಬೆಳಿಗ್ಗೆ ನಿಧನರಾದರು.

ಶಾಸಕರು ತಿಂಡಿಮ್‌ಗೆ ತೆರಳುತ್ತಿದ್ದಾಗ ಅವರಿದ್ದ ಕಾರು ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದಿದೆ. ಅವರ ಎದೆ ಮತ್ತು ತಲೆಗೆ ಗಂಭೀರ ಗಾಯಗಳಾಗಿದ್ದು, ತಕ್ಷಣವೇ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಆದರೂ ಪ್ರಯೋಜನವಾಗಲಿಲ್ಲ. ಘಟನೆಯಲ್ಲಿ ಕಾರಿನ ಚಾಲಕ ಸೇರಿದಂತೆ ಇನ್ನೂ ಮೂವರು ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ತಮಿಳುನಾಡಿನ ಮುಖ್ಯಮಂತ್ರಿ ಕೆ.ಪಳನಿಸ್ವಾಮಿ ಘಟನೆಗೆ ಸಂತಾಪ ಸೂಚಿಸಿದ್ದು, ರಾಜೇಂದ್ರ ಅವರ ನಿಧನದಿಂದ ಪಕ್ಷಕ್ಕೆ ತುಂಬಲಾರದ ನಷ್ಟವಾಗಿದೆ ಎಂದು ಹೇಳಿದ್ದಾರೆ. ರಾಜೇಂದ್ರ ಅವರು ಮೊದಲ ಬಾರಿಯ ಶಾಸಕರಾಗಿದ್ದಾರೆ.

ಇರ್ತಾರಾ ಮೋದಿ? ಬರ್ತಾರಾ ರಾಹುಲ್?

ಲೋಕಸಭೆ ಫಲಿತಾಂಶಕ್ಕಾಗಿ ವಿಶ್ವವೇ ಬೆರಗುಗಣ್ಣಿನಿಂದ ಕಾಯುತ್ತಿದೆ. ನರೇಂದ್ರ ಮೋದಿ ಗೆಲ್ತಾರಾ? ರಾಹುಲ್‌ ಗಾಂಧಿ ಬರ್ತಾರಾ? ರಾಜಕಾರಣದ ಕ್ಷಣಕ್ಷಣದ ಮಾಹಿತಿ, ತಾಜಾ ಅಪ್‌ಡೇಟ್‌ಗಳಿಗಾಗಿ www.prajavani.net/prajamatha ನೋಡಿ.

ಫೇಸ್‌ಬುಕ್‌ನಲ್ಲಿ ನಮ್ಮನ್ನು ಲೈಕ್ ಮಾಡಿ ಅಥವಾ ಟ್ವಿಟರ್, ಯೂಟ್ಯೂಬ್, ಇನ್‌ಸ್ಟಾಗ್ರಾಂನಲ್ಲಿ ಫಾಲೊ ಮಾಡಿ.

ತ್ವರಿತ ಸುದ್ದಿ, ನಿಖರ ವಿಶ್ಲೇಷಣೆಗೆ www.prajavani.net ಓದಿ. 'ಪ್ರಜಾವಾಣಿ' ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

 • 5

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !