‘ಸರ್ಕಾರ್’ಗೆ ಎಐಎಡಿಎಂಕೆ ಆಕ್ಷೇಪ

7

‘ಸರ್ಕಾರ್’ಗೆ ಎಐಎಡಿಎಂಕೆ ಆಕ್ಷೇಪ

Published:
Updated:

ಚೆನ್ನೈ: ವಿಜಯ್ ಅವರು ನಟಿಸಿರುವ ‘ಸರ್ಕಾರ್‌’ ಚಲನಚಿತ್ರದಲ್ಲಿನ ಕೆಲವು ದೃಶ್ಯಗಳ ಬಗ್ಗೆ ಎಐಎಡಿಎಂಕೆ ಆಕ್ಷೇಪ ವ್ಯಕ್ತಪಡಿಸಿದೆ.

ಈ ಚಿತ್ರದಲ್ಲಿ ಮಾಜಿ ಮುಖ್ಯಮಂತ್ರಿ ದಿವಂಗತ ಜೆ. ಜಯಲಲಿತಾ ಅವರ ಕುರಿತು ಮತ್ತು ಕೇಂದ್ರ ಸರ್ಕಾರದ ಕೆಲವು ಯೋಜನೆಗಳ ಬಗ್ಗೆ ಕೆಟ್ಟದಾಗಿ ಬಿಂಬಿಸಲಾಗಿದೆ ಎಂದು ಅದು ಅಸಮಾಧಾನ ವ್ಯಕ್ತಪಡಿಸಿದೆ.

‘ಚಿತ್ರದಲ್ಲಿರುವ ನಕಾರಾತ್ಮಕ ಅಂಶಗಳನ್ನು ತೆಗೆದುಹಾಕಬೇಕು. ಅದಕ್ಕೆ ಒಪ್ಪದಿದ್ದರೆ ಕಾನೂನು ಕ್ರಮ ಜರುಗಿಸಲಾಗುವುದು’ ಎಂದು ಸಚಿವ ಡಿ. ಜಯಕುಮಾರ್‌ ಎಚ್ಚರಿಸಿದ್ದಾರೆ.

ಮದುರೆಯಲ್ಲಿ ‘ಸರ್ಕಾರ್‌’ ಪ್ರಸಾರವಾಗುತ್ತಿದ್ದ ಚಿತ್ರಮಂದಿರದ ಎದುರು ಎಐಎಡಿಎಂಕೆ ಕಾರ್ಯಕರ್ತರು ಪ್ರತಿಭಟನೆ ನಡೆಸಿ, ಆಕ್ಷೇಪಾರ್ಹ ದೃಶ್ಯಗಳನ್ನು ತೆಗೆದು ಹಾಕುವವರೆಗೂ ಚಿತ್ರ ಪ್ರದರ್ಶನಕ್ಕೆ ಅವಕಾಶ ನೀಡು
ವುದಿಲ್ಲ ಎಂದು ಪಟ್ಟುಹಿಡಿದರು. ಬಳಿಕ ಚಿತ್ರದ ಪ್ರದರ್ಶನವನ್ನು ಸ್ಥಗಿತಗೊಳಿಸಲಾಯಿತು.

ಕಮಲ್‌ ಟೀಕೆ: ‘ಸರ್ಕಾರ್‌’ ಚಿತ್ರಕ್ಕೆ ವಿರೋಧ ವ್ಯಕ್ತಪಡಿಸುತ್ತಿರುವ ಎಐಎಡಿಎಂಕೆ ನಿಲುವನ್ನು ನಟ, ರಾಜಕಾರಣಿ ಕಮಲ್‌ ಹಾಸನ್‌ ಖಂಡಿಸಿದ್ದಾರೆ. ಟೀಕೆಗಳನ್ನು ಒಪ್ಪಿಕೊಳ್ಳದ ಸರ್ಕಾರ ಹಳಿ ತಪ್ಪುತ್ತದೆ ಎಂದು ಹೇಳಿದ್ದಾರೆ.

ಬರಹ ಇಷ್ಟವಾಯಿತೆ?

 • 1

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !