ಅಸ್ವಸ್ಥರಾದ ಪ್ರಯಾಣಿಕರು: ಏರ್ ಇಂಡಿಯಾ ಎಕ್ಸ್‌ಪ್ರೆಸ್‌ ವಿಮಾನ ತುರ್ತು ಭೂಸ್ಪರ್ಶ

7

ಅಸ್ವಸ್ಥರಾದ ಪ್ರಯಾಣಿಕರು: ಏರ್ ಇಂಡಿಯಾ ಎಕ್ಸ್‌ಪ್ರೆಸ್‌ ವಿಮಾನ ತುರ್ತು ಭೂಸ್ಪರ್ಶ

Published:
Updated:

ಮಸ್ಕತ್: ವಿಮಾನದಲ್ಲಿ ಪ್ರಯಾಣಿಸುತ್ತಿದ್ದಾಗ ಪ್ರಯಾಣಿಕರ ಆರೋಗ್ಯದಲ್ಲಿ ಏರುಪೇರು ಉಂಟಾದ ಕಾರಣ ಮಸ್ಕತ್‍ನಿಂದ ಕೇರಳದ ಕೋಯಿಕ್ಕೋಡ್‍ಗೆ ಹೊರಟಿದ್ದ ಏರ್ ಇಂಡಿಯಾ ಎಕ್ಸ್‌ಪ್ರೆಸ್‌ ವಿಮಾನ ವಾಪಸ್ ಮಸ್ಕತ್ ವಿಮಾನ ನಿಲ್ದಾಣಕ್ಕೆ ಬಂದಿಳಿದ ಘಟನೆ ನಡೆದಿದೆ. ಭಾನುವಾರ ಮಧ್ಯಾಹ್ನ ಈ ವಿಮಾನ ಮಸ್ಕತ್‍ನಿಂದ ಹೊರಟಿತ್ತು.

ನಾಲ್ಕು ಮಂದಿ ಪ್ರಯಾಣಿಕರಿಗೆ ಮೂಗಿನಲ್ಲಿ ರಕ್ತ ಸ್ರಾವವುಂಟಾಗಿದ್ದು, ಇನ್ನು ಕೆಲವರಿಗೆ ತೀವ್ರ ತಲೆನೋವು ಕಾಣಿಸಿಕೊಂಡಿದೆ.  ಮಸ್ಕತ್‍ಗೆ ಬಂದಿಳಿದ ಕೂಡಲೇ ಪ್ರಯಾಣಿಕರನ್ನು ವೈದ್ಯರು ತಪಾಸಣೆ ಮಾಡಿದ್ದಾರೆ.

ವಿಳಂಬವಾಗಿ ಹೊರಟ ವಿಮಾನ ಸಂಜೆ ಕೋಯಿಕ್ಕೋಡ್ ತಲುಪಿತ್ತು.

ಎಎಕ್ಸ್-350 ವಿಮಾನ ಮಸ್ಕತ್ ವಿಮಾನ ನಿಲ್ದಾಣದಿಂದ ಹಾರಾಟ ನಡೆಸುತ್ತಿದ್ದಂತೆ ಪ್ರಯಾಣಿಕರಿಗೆ ಅಸ್ವಸ್ಥರಾಗಿದ್ದಾರೆ. ತಕ್ಷಣವೇ ವಿಮಾನವನ್ನು ವಾಪಸ್ ಲ್ಯಾಂಡಿಂಗ್ ಮಾಡಲಾಯಿತು ಎಂದು ಮಲಯಾಳ ಮನೋರಮ ಪತ್ರಿಕೆ ವರದಿ ಮಾಡಿದೆ.

ಮೂವರು ಮಕ್ಕಳು ಸೇರಿದಂತೆ 185 ಪ್ರಯಾಣಿಕರು ಈ ವಿಮಾನದಲ್ಲಿದ್ದರು. ವಿಮಾನದಲ್ಲಿನ ಒತ್ತಡ ಸಮಸ್ಯೆಯಿಂದಾಗಿ ವಿಮಾನ ತುರ್ತು ಭೂಸ್ಪರ್ಶ ಮಾಡಿದ್ದು, ಪ್ರಯಾಣಿಕರು ಮತ್ತು ವಿಮಾನ ಸಿಬ್ಬಂದಿ ಸುರಕ್ಷಿತರಾಗಿದ್ದಾರೆ ಎಂದು ಏರ್ ಇಂಡಿಯಾ ಎಕ್ಸ್‌ಪ್ರೆಸ್‌ ಹೇಳಿದೆ.
 

ಬರಹ ಇಷ್ಟವಾಯಿತೆ?

 • 8

  Happy
 • 2

  Amused
 • 0

  Sad
 • 2

  Frustrated
 • 5

  Angry

Comments:

0 comments

Write the first review for this !