ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೋವಿಡ್‌–19: ರೋಮ್‌ನಲ್ಲಿ ಸಿಲುಕಿರುವ ಭಾರತೀಯರು, ಕರೆತರಲು ಏರ್‌ ಇಂಡಿಯಾ ಸಜ್ಜು

Last Updated 21 ಮಾರ್ಚ್ 2020, 6:43 IST
ಅಕ್ಷರ ಗಾತ್ರ

ನವದೆಹಲಿ: ಕೊರೊನಾ ವೈರಸ್‌ನಿಂದ ಎದುರಾಗಿರುವ ಬಿಕ್ಕಟ್ಟಿನಿಂದ ರೋಮ್‌ನಲ್ಲಿ ಸಂಕಷ್ಟದಲ್ಲಿರುವ ಭಾರತೀಯರನ್ನು ಕರೆತರಲು ಸರ್ಕಾರಿ ಸ್ವಾಮ್ಯದ ದೇಶೀಯ ವಿಮಾನಯಾನ ಸಂಸ್ಥೆ ಏರ್‌ ಇಂಡಿಯಾ ಶನಿವಾರ ವಿಮಾನ ಕಳುಹಿಸುತ್ತಿದೆ.

ಏರ್‌ ಇಂಡಿಯಾದ '787 ಡ್ರೀಮ್‌ಲೈನರ್‌' ವಿಮಾನವು ದೆಹಲಿ ವಿಮಾನ ನಿಲ್ದಾಣದಿಂದ ಇಂದು ಮಧ್ಯಾಹ್ನ 2:30ಕ್ಕೆ ರೋಮ್‌ನತ್ತ ಪ್ರಯಾಣಿಸಲಿದೆ ಎಂದು ಏರ್ ಇಂಡಿಯಾದ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ರೋಮ್‌ನಲ್ಲಿ ಸಿಲುಕಿರುವ ಎಲ್ಲ ಭಾರತೀಯರು ಏರ್‌ ಇಂಡಿಯಾ ವಿಮಾನದ ಮೂಲಕ ಭಾನುವಾರ ಬೆಳಿಗ್ಗೆ ದೆಹಲಿಗೆ ಬಂದಿಳಿಯಲಿದ್ದಾರೆ ಎಂದಿದ್ದಾರೆ.

ಮಾರ್ಚ್‌ 22, ಭಾನುವಾರದಿಂದ ಭಾರತದ ವಿಮಾನ ನಿಲ್ದಾಣಗಳಲ್ಲಿ ಯಾವುದೇ ಅಂತರರಾಷ್ಟ್ರೀಯ ವಿಮಾನಗಳು ಇಳಿಯಲು ಅವಕಾಶವಿಲ್ಲ ಎಂದು ಕೇಂದ್ರ ಸರ್ಕಾರ ಗುರುವಾರ ಪ್ರಕಟಣೆ ಹೊರಡಿಸಿದೆ. ಒಂದು ವಾರ ಈ ನಿರ್ಬಂಧ ಮುಂದುವರಿಸಲು ನಿರ್ಧರಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT