ಮಂಗಳವಾರ, ಫೆಬ್ರವರಿ 25, 2020
19 °C

ದೇಶದಲ್ಲಿ ಧರ್ಮಾಂಧತೆ, ದ್ವೇಷದ ಗಾಳಿ ಆವರಿಸಿದೆ: ಪಶ್ಚಿಮ ಬಂಗಾಳ ರಾಜ್ಯಪಾಲ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಕೋಲ್ಕತ್ತ: ಬಜೆಟ್‌ ಅಧಿವೇಶನದ ಆರಂಭಕ್ಕೂ ಮುನ್ನ ಸರ್ಕಾರ ಸಿದ್ಧಪಡಿಸಿದ ಭಾಷಣವನ್ನೇ ಪಶ್ಚಿಮ ಬಂಗಾಳ ರಾಜ್ಯಪಾಲ ಜಗ್‌ದೀಪ್‌ ಧನ್‌ಕರ್‌ ಬಜೆಟ್‌ ಅಧಿವೇಶನದಲ್ಲಿ ಯಥಾವತ್ತಾಗಿ ಓದಿದ್ದಾರೆ. ಭಾಷಣದ ಅಂಶಗಳಲ್ಲಿ ಯಾವುದೇ ಬದಲಾವಣೆಗಳನ್ನು ರಾಜ್ಯಪಾಲರು ಮಾಡಿಲ್ಲ.

ಎನ್‌ಆರ್‌ಸಿ ವಿರೋಧಿಸಿ ನಡೆದ ಪ್ರತಿಭಟನೆಗಳಲ್ಲಿ ಮೃತಪಟ್ಟವರಿಗೆ ಸಂತಾಪ ಸೂಚಿಸಿದ ರಾಜ್ಯಪಾಲರು, ಸಂವಿಧಾನದ ಮೂಲ ಆಶಯಗಳನ್ನು ಉಳಿಸಿಕೊಳ್ಳುವ ಸವಾಲು ಎದುರಾಗಿದೆ. ಪ್ರಜಾಪ್ರಭುತ್ವದ ಉಳಿವು ಅಂಕಿಗಳ ಮೇಲಿಲ್ಲ. ಎಲ್ಲ ನಾಗರಿಕರ ಭದ್ರತೆ ಮತ್ತು ಭಾವನೆಗಳ ರಕ್ಷಣೆಯ ಮೇಲಿದೆ ಎಂದು ಹೇಳಿದ್ದಾರೆ. 

ರಾಷ್ಟ್ರವಾದದ ಹೆಸರಿನಲ್ಲಿ ಹರಡಲಾಗುತ್ತಿರುವ ತಪ್ಪುಮಾಹಿತಿಗಳನ್ನು ನಿರಾಕರಿಸಬೇಕು. ದೇಶದಲ್ಲಿ ಅಸಹಿಷ್ಣುತೆ, ಧರ್ಮಾಂಧತೆ, ದ್ವೇಷದ ಗಾಳಿಯು ಆವರಿಸಿದೆ.  ಬಡತನ ಮತ್ತು ನಿರುದ್ಯೋಗ ಸಮಸ್ಯೆಗಳನ್ನು ತೊಡೆದುಹಾಕಬೇಕಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ. 

ಎನ್‌ಪಿಆರ್‌, ಎನ್‌ಆರ್‌ಸಿ ಹೆಸರಿನಲ್ಲಿ ಜನರಲ್ಲಿ ಒಡಕು ಉಂಟುಮಾಡುವ ಪ್ರಯತ್ನಗಳನ್ನು ರಾಜ್ಯ ಸರ್ಕಾರ ವಿರೋಧಿಸುತ್ತದೆ ಎಂದೂ ಅವರು ಹೇಳಿದ್ದಾರೆ.  

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು