ಗುರುವಾರ , ಅಕ್ಟೋಬರ್ 17, 2019
22 °C

ಏರ್‌ಸೆಲ್‌–ಮ್ಯಾಕ್ಸಿಸ್‌ ಪ್ರಕರಣ: ಚಿದಂಬರಂ ಜಾಮೀನು ರದ್ದತಿಗೆ ಇ.ಡಿ ಮನವಿ

Published:
Updated:

ನವದೆಹಲಿ: ಏರ್‌ಸೆಲ್‌ ಮ್ಯಾಕ್ಸಿಸ್‌ ಪ್ರಕರಣದಲ್ಲಿ ಕಾಂಗ್ರೆಸ್‌ ಮುಖಂಡ ಪಿ. ಚಿದಂಬರಂ ಮತ್ತು ಅವರ ಪುತ್ರ ಸಂಸದ ಕಾರ್ತಿ ಚಿದಂಬರಂ ಅವರಿಗೆ ನೀಡಿರುವ ನಿರೀಕ್ಷಣಾ ಜಾಮೀನನ್ನು ರದ್ದು ಪಡಿಸುವಂತೆ ಕೋರಿ ಜಾರಿ ನಿರ್ದೇಶನಾಲಯ (ಇ.ಡಿ) ದೆಹಲಿ ಹೈಕೋರ್ಟ್‌ಗೆ ಗುರುವಾರ ಮನವಿ ಮಾಡಿದೆ.

ಇ.ಡಿ ಅರ್ಜಿಯು ಶುಕ್ರವಾರ ವಿಚಾರಣೆಗೆ ಬರುವ ಸಾಧ್ಯತೆ ಇದೆ. ವಿಶೇಷ ನ್ಯಾಯಾಲಯವು ಚಿದಂಬರಂ ಮತ್ತು ಕಾರ್ತಿ ಅವರಿಗೆ ಸೆಪ್ಟೆಂಬರ್‌ 5ರಂದು ಮಂಜೂರು ಮಾಡಿದ್ದ ನಿರೀಕ್ಷಣಾ ಜಾಮೀನನ್ನು ಇ.ಡಿ ಪ್ರಶ್ನಿಸಿದೆ. ಐಎನ್‌ಎಕ್ಸ್‌ ಮೀಡಿಯಾ ಭ್ರಷ್ಟಾಚಾರ ಪ್ರಕರಣದಲ್ಲಿ ಸಿಬಿಐ ಆಗಸ್ಟ್‌ 21ರಂದು ಚಿದಂಬರಂ ಅವರನ್ನು ಬಂಧಿಸಿದೆ. 

Post Comments (+)