ವಾರಣಾಸಿ: ಮೋದಿ ವಿರುದ್ಧ ಸ್ಪರ್ಧಿಸಲಿದ್ದಾರೆ ಕಾಂಗ್ರೆಸ್‌ನ ಅಜಯ್ ರಾಯ್

ಶನಿವಾರ, ಮೇ 25, 2019
22 °C

ವಾರಣಾಸಿ: ಮೋದಿ ವಿರುದ್ಧ ಸ್ಪರ್ಧಿಸಲಿದ್ದಾರೆ ಕಾಂಗ್ರೆಸ್‌ನ ಅಜಯ್ ರಾಯ್

Published:
Updated:

ವಾರಣಾಸಿ: ವಾರಣಾಸಿ ಲೋಕಸಭಾ ಕ್ಷೇತ್ರದಲ್ಲಿ ನರೇಂದ್ರ ಮೋದಿ ವಿರುದ್ದ ಕಾಂಗ್ರೆಸ್‌ನ ಅಜಯ್ ರಾಯ್ ಸ್ಪರ್ಧಿಸಲಿದ್ದಾರೆ. ಮೋದಿ ವಿರುದ್ಧ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಸ್ಪರ್ಧಿಸಲಿದ್ದಾರೆ ಎಂಬ ಊಹಾಪೋಹಗಳು ಕೇಳಿ ಬಂದಿತ್ತು.  ಆದರೆ ಈ ಊಹಾಪೋಹಗಳಿಗೆ ತೆರೆ ಎಳೆದು ಕಾಂಗ್ರೆಸ್ ಮತ್ತೊಮ್ಮೆ ಅಜಯ್ ರಾಯ್ ಅವರನ್ನೇ ಇಲ್ಲಿ ಕಣಕ್ಕಿಳಿಸಿದೆ.

2014ರ ಲೋಕಸಭಾ ಚುನಾವಣೆಯಲ್ಲಿ ಅಜಯ್ ರಾಯ್ ಮೋದಿ ವಿರುದ್ಧ ಸ್ಪರ್ಧಿಸಿದ್ದು, ಮೂರನೇ ಸ್ಥಾನ ಪಡೆದಿದ್ದರು. ಇಲ್ಲಿ ಮೋದಿ 3.37 ಲಕ್ಷ ಮತಗಳ ಅಂತರದಿಂದ ಗೆದ್ದಿದ್ದರು. 

ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಸ್ಪರ್ಧಿಸಲಿದ್ದೀರಾ? ಎಂದು ಪ್ರಿಯಾಂಕಾ ಗಾಂಧಿಯಲ್ಲಿ ಕೇಳಿದಾಗ ಈ ಬಗ್ಗೆ ಕಾಂಗ್ರೆಸ್ ನಿರ್ಧಾರ ಕೈಗೊಳ್ಳಲಿದೆ. ಪಕ್ಷದ ನಿರ್ಧಾರವನ್ನು ತಿಳಿಸುತ್ತೇವೆ. ನನ್ನಲ್ಲಿ ಪಕ್ಷ ಏನು ಹೇಳುತ್ತದೋ ಅದನ್ನು ನಾನು ಮಾಡುತ್ತೇನೆ ಎಂದು ಹೇಳಿದ್ದರು.

ಬರಹ ಇಷ್ಟವಾಯಿತೆ?

 • 17

  Happy
 • 1

  Amused
 • 0

  Sad
 • 0

  Frustrated
 • 3

  Angry

Comments:

0 comments

Write the first review for this !