ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಹಾರಾಷ್ಟ್ರ ಉಪ ಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್‌ ಪವಾರ್‌ ರಾಜೀನಾಮೆ

Last Updated 26 ನವೆಂಬರ್ 2019, 11:17 IST
ಅಕ್ಷರ ಗಾತ್ರ

ಮುಂಬೈ: ಮಹಾರಾಷ್ಟ್ರದ ಉಪ ಮುಖ್ಯಮಂತ್ರಿ ಅಜಿತ್‌ ಪವಾರ್‌ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

ಮಹಾರಾಷ್ಟ್ರದಲ್ಲಿ ಅಸ್ತಿತ್ವದಲ್ಲಿರುವ ಸರ್ಕಾರದಲ್ಲಿ ಬಿಜೆಪಿಯ ದೇವೇಂದ್ರ ಫಡಣವೀಸ್‌ ಮುಖ್ಯಮಂತ್ರಿಯಾಗಿದ್ದರೆ, ಅಜಿತ್‌ ಪವಾರ್‌ ಉಪ ಮುಖ್ಯಮಂತ್ರಿಯಾಗಿದ್ದಾರೆ. ಸರ್ಕಾರ ನಾಳೆ (ಬುಧವಾರ ) ಸಂಜೆ 5 ಗಂಟೆಯ ಒಳಗಾಗಿ ಬಹುಮತ ಸಾಬೀತು ಮಾಡಬೇಕಾಗಿ ಸುಪ್ರೀಂ ಕೋರ್ಟ್‌ ಮಂಗಳವಾರ ಮಹತ್ವದ ಆದೇಶ ನೀಡಿತ್ತು.

ಬಹುಮತ ಸಾಬೀತುಪಡಿಸಲು ಅಗತ್ಯವುಳ್ಳ ಸಂಖ್ಯಾಬಲ ಹೊಂದಿಸುವುದು ಅನುಮಾನವಾದದ್ದರಿಂದ ಪವಾರ್ ರಾಜೀನಾಮೆ ನೀಡಿದ್ದಾರೆ.

ಮುಂಜಾನೆ ಅಜಿತ್ ಪವಾರ್ ಅವರನ್ನು ಸುಪ್ರಿಯಾ ಸುಳೆ ಅವರ ಪತಿ ಸದಾನಂದ ಸುಳೆ ಭೇಟಿಯಾಗಿದ್ದರು. ನಂತರ ಹಿರಿಯ ನಾಯಕರಾದ ಪ್ರಫುಲ್ ಪಟೇಲ್, ಛಗಲ್ ಭುಜಬಲ್, ಜಯಂತ್ ಪಾಟೀಲ್ ಮತ್ತು ದಿಲೀಪ್ ವಾಲ್ಸೆ ಪಾಟೀಲ್ ಅಜಿತ್ ಅವರೊಂದಿಗೆ ಮಾತುಕತೆ ನಡೆಸಿದ್ದರು.

ರಾಜೀನಾಮೆಗೂ ಮುನ್ನ ಮುಖ್ಯಮಂತ್ರಿಯ ಅಧಿಕೃತ ನಿವಾಸ ‘ವರ್ಷಾ’ದಲ್ಲಿ ಮಧ್ಯಾಹ್ನ ದೇವೇಂದ್ರ ಫಡಣವೀಸ್ ಮತ್ತು ಅಜಿತ್ ಪವಾರ್ ಕೆಲ ಸಮಯ ಪರಸ್ಪರ ಮಾತುಕತೆ ನಡೆಸಿದ್ದರು ಎನ್ನಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT