ಗುರುವಾರ , ಫೆಬ್ರವರಿ 20, 2020
30 °C

ಸಿಎಎಗೆ ವಿರೋಧ| ದೆಹಲಿಯಲ್ಲಿ ಬಿಜೆಪಿ ಜೊತೆ ಮೈತ್ರಿ ಖತಂ: ಶಿರೋಮಣಿ ಅಕಾಲಿದಳ

ಏಜೆನ್ಸಿಸ್ Updated:

ಅಕ್ಷರ ಗಾತ್ರ : | |

ನವದೆಹಲಿ: ಪೌರತ್ವ (ತಿದ್ದುಪಡಿ)ಕಾಯ್ದೆ ಜಾರಿಗೆ ವಿರೋಧ ವ್ಯಕ್ತಪಡಿಸಿದ್ದರಿಂದ ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ನಮ್ಮ ಜೊತೆ ಮೈತ್ರಿ ಮಾಡಿಕೊಳ್ಳುತ್ತಿಲ್ಲ ಎಂದು ಶಿರೋಮಣಿ ಅಕಾಲಿದಳ (ಎಸ್ ಎಡಿ) ಪಕ್ಷದ ವಕ್ತಾರ ದಲ್ಜಿತ್ ಸಿಂಗ್ ಚೀಮಾ ಹೇಳಿದ್ದಾರೆ.

ಇದರಿಂದಾಗಿ ಸಿಎಎ ಜಾರಿ ಸಂಬಂಧ ಪಕ್ಷದ ನಿಲುವು ಬದಲಾಗುವುದಿಲ್ಲ. ಈ ಕಾಯ್ದೆ ಜಾರಿಗೆ ಬಂದಾಗಿನಿಂದ ಪಕ್ಷ ವಿರೋಧಿಸುತ್ತದೆ ಎಂದು ಪಕ್ಷದ ವಕ್ತಾರ ಸಿಂಗ್ ಹೇಳಿದ್ದಾರೆ.

ಸೋಮವಾರ ದೆಹಲಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಹಾಗೂ ಶಿರೋಮಣಿ ಅಕಾಲಿದಳ ಬಹು ದೀರ್ಘಕಾಲದಿಂದಲೂ ಮೈತ್ರಿ ಮಾಡಿಕೊಂಡಿತ್ತು. ಈಗ ಬಿಜೆಪಿ ಇದನ್ನು ತಿರಸ್ಕರಿಸಿದೆ. ಇದಕ್ಕೆ ಕಾರಣ ಪಕ್ಷವು ಸಿಎಎಗೆ ವಿರೋಧ ವ್ಯಕ್ತಪಡಿಸುತ್ತಿರುವುದು. ಶಿರೋಮಣಿ ಅಕಾಲಿದಳ ಯಾವಾಗಲೂ ತನ್ನ ನಿರ್ಧಾರದಿಂದ ಹಿಂದೆ ಸರಿಯುವುದಿಲ್ಲ, ಪಕ್ಷ ತನ್ನ ನಿರ್ಧಾರಕ್ಕೆ ಬದ್ಧವಾಗಿರುತ್ತದೆ ಎಂದು ಅವರು ಹೇಳಿದರು.

ಇದನ್ನೂ ಓದಿ: ಫೆಬ್ರುವರಿ 8ಕ್ಕೆ ದೆಹಲಿ ವಿಧಾನಸಭೆ ಚುನಾವಣೆ: 11ಕ್ಕೆ ಫಲಿತಾಂಶ

ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಎಸ್‌ಎಡಿ ಜೊತೆ ಮೈತ್ರಿ ಮಾಡಿಕೊಳ್ಳುವುದಿಲ್ಲ ಎಂದು ಬಿಜೆಪಿ ಹೇಳಿದೆ. ದೆಹಲಿಯಲ್ಲಿ ಸುಮಾರು 10 ಲಕ್ಷ ಸಿಖ್ ಜನಸಂಖ್ಯೆ ಇದ್ದು, 70 ವಿಧಾನಸಭಾ ಕ್ಷೇತ್ರಗಳಲ್ಲಿ 10 ಕ್ಷೇತ್ರಗಳಲ್ಲಿ ಬಿಜೆಪಿ ಅಭ್ಯರ್ಥಿಗಳ ಮೇಲೆ ಇದರ ಪರಿಣಾಮಗಳನ್ನು ಕಾಣಬಹುದು ಎಂದು ರಾಜಕೀಯ ವಿಶ್ಲೇಷಕರು ಅಭಿಪ್ರಾಯಪಟ್ಟಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು