ಭಾನುವಾರ, ಮಾರ್ಚ್ 29, 2020
19 °C

ಒತ್ತಡವಿಲ್ಲದೆ ಪರೀಕ್ಷೆ ಎದುರಿಸಿ: ಪ್ರಧಾನಿ ಸಲಹೆ

ಪಿಟಿಐ Updated:

ಅಕ್ಷರ ಗಾತ್ರ : | |

ನವದೆಹಲಿ: ಸಿಬಿಎಸ್‌ಇ ಹತ್ತನೇ  ಹಾಗೂ ಹನ್ನೆರಡನೇ ತರಗತಿ ಪರೀಕ್ಷೆಗಳು ಶನಿವಾರದಿಂದ ಆರಂಭವಾಗಿದ್ದು, ‘ಒತ್ತಡವಿಲ್ಲದೆ ಸಂತಸದಿಂದ ಪರೀಕ್ಷೆ ಎದುರಿಸಿ’ ಎಂದು ಪ್ರಧಾನಿ ನರೇಂದ್ರ ಮೋದಿ ಸಲಹೆ ನೀಡಿದ್ದಾರೆ.

ಪರೀಕ್ಷೆ ಎದುರಿಸುತ್ತಿರುವ ವಿದ್ಯಾರ್ಥಿಗಳನ್ನು ‘ಪರೀಕ್ಷಾ ಹೋರಾಟಗಾರರು’ ಎಂದು ಕರೆದಿರುವ ಪ್ರಧಾನಿ, ತಿಂಗಳುಗಟ್ಟಲೆ ವಹಿಸಿದ ಶ್ರಮ ಹಾಗೂ ಮಾಡಿಕೊಂಡ ಸಿದ್ಧತೆ ‘ಖಂಡಿತಾ ಉತ್ತಮ ಫಲಿತಾಂಶವನ್ನೇ ಕೊಡುತ್ತದೆ’ ಎಂದು ಟ್ವೀಟ್ ಮಾಡಿದ್ದಾರೆ.

‘ನನ್ನ ಕಿರಿಯ ಸ್ನೇಹಿತರಿಗೆ, ಅವರ ಪೋಷಕರಿಗೆ ಹಾಗೂ ಶಿಕ್ಷಕರಿಗೆ ಒಳಿತಾಗಲಿ’ ಎಂದು ಟ್ವೀಟ್‌ನಲ್ಲಿ ತಿಳಿಸಿದ್ದಾರೆ. 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು