ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಲಸೆ ಕಾರ್ಮಿಕರ ಆಯೋಗದ ರಚನೆ ಅಗತ್ಯ ಪ್ರಶ್ನಿಸಿದ ಅಖಿಲೇಶ್

Akhilesh questions need for migrant workers' commission in UP
Last Updated 26 ಮೇ 2020, 19:13 IST
ಅಕ್ಷರ ಗಾತ್ರ

ಲಖನೌ: ಉತ್ತರ ಪ್ರದೇಶದಲ್ಲಿ ವಲಸೆ ಕಾರ್ಮಿಕರಿಗಾಗಿ ಪ್ರತ್ಯೇಕ ಆಯೋಗ ರಚಿಸುವ ಅಗತ್ಯವಿದೆಯೇ ಎಂದು ಮಂಗಳವಾರ ಸಮಾಜವಾದಿ ಪಕ್ಷದ (ಎಸ್‌ಪಿ) ಮುಖ್ಯಸ್ಥ ಅಖಿಲೇಶ್ ಯಾದವ್ ಪ್ರಶ್ನಿಸಿದ್ದಾರೆ.

‘ಉದ್ಯೋಗ ವಿನಿಮಯ ಈಗಾಗಲೇ ಅಸ್ತಿತ್ವದಲ್ಲಿದ್ದು ಆಯೋಗ ರಚನೆಯು, ಸರ್ಕಾರದ ವೈಫಲ್ಯಗಳು, ಜನ್‌–ಧನ್‌ (ಮಾನವ ಶಕ್ತಿ ಮತ್ತು ಹಣ) ದುರುಪಯೋಗಗಳಿಂದ ಜನರ ಮನಸ್ಸನ್ನು ಬೇರೆಡೆಗೆ ಸೆಳೆಯುವ ಮಾರ್ಗವಾಗಿದೆ’ ಎಂದು ಅವರು ಟ್ವೀಟ್‌ನಲ್ಲಿ ಆರೋಪಿಸಿದ್ದಾರೆ.

ವಲಸೆ ಕಾರ್ಮಿಕರಿಗಾಗಿಯೇ ಪ್ರತ್ಯೇಕ ಆಯೋಗ ರಚಿಸುವುದಾಗಿ ಉತ್ತರ ಪ್ರದೇಶ ಸರ್ಕಾರ ತಿಳಿಸಿತ್ತು. ಈ ನಿರ್ಧಾರಕ್ಕೆ ಅಖಿಲೇಶ್ ಯಾದವ್ ಟ್ವಿಟ್ಟರ್‌ನಲ್ಲಿ ಹಿಂದಿಯಲ್ಲಿಪ್ರತಿಕ್ರಿಯಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT