ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚುನಾವಣಾ ಸ್ಪರ್ಧೆ ಅಲ್ಲಗಳೆದ ಅಕ್ಷಯ್ ಕುಮಾರ್

Last Updated 22 ಏಪ್ರಿಲ್ 2019, 20:15 IST
ಅಕ್ಷರ ಗಾತ್ರ

ಮುಂಬೈ: ರಾಜಕೀಯಕ್ಕೆ ಸೇರ್ಪಡೆ ಬಗ್ಗೆ ಸಾಮಾಜಿಕ ಜಾಲ ತಾಣಗಳಲ್ಲಿ ಹಬ್ಬಿದ್ದ ಊಹಾ ಪೋಹ ಗಳಿಗೆ ಬಾಲಿವುಡ್ ನಟ ಅಕ್ಷಯ್ ಕುಮಾರ್ ತೆರೆ ಎಳೆದಿದ್ದಾರೆ.

ಅಕ್ಷಯ್ ಅವರು ಮೊದಲು ಮಾಡಿದ್ದ ಟ್ವೀಟ್ ಊಹಾಪೋಹ ಹುಟ್ಟು ಹಾಕಿತ್ತು. ‘‍ಅಪರಿಚಿತ ಕ್ಷೇತ್ರಕ್ಕೆ ಕಾಲಿಡುತ್ತಿದ್ದೇನೆ. ಈವರೆಗೆ ಮಾಡಿರದ ಕೆಲಸಗಳನ್ನು ಇಲ್ಲಿ ನಿರ್ವಹಿಸಲಿದ್ದೇನೆ. ಇದು ರೋಮಾಂಚಕ ಕ್ಷಣ. ಕಾದು ನೋಡಿ’ ಎಂದು ಟ್ವೀಟ್ ಮಾಡಿದ್ದರು. ಬಳಿಕ, ಅಕ್ಷಯ್ ರಾಜಕೀಯಕ್ಕೆ ಸೇರುತ್ತಾರೆ ಎಂದೇ ಚರ್ಚೆ ನಡೆಯಲಾರಂಭಿಸಿತು.

ಕೆಲ ಗಂಟೆಗಳ ಬಳಿಕ ಮತ್ತೊಂದು ಟ್ವೀಟ್ ಮಾಡಿದ ಅವರು, ತಾವು ಚುನಾವಣೆಯಲ್ಲಿ ಸ್ಪರ್ಧಿಸುತ್ತಿಲ್ಲ ಎಂದು ಸ್ಪಷ್ಟಪಡಿಸಿದರು. ‘ನೀವೆಲ್ಲಾ ನನ್ನ ಮೇಲೆ ಎಷ್ಟೊಂದು ಪ್ರೀತಿ ಇಟ್ಟುಕೊಂಡಿದ್ದೀರಿ. ನಿಮಗೆ ಧನ್ಯವಾದ. ಆದರೆ ನಾನು ರಾಜಕೀಯಕ್ಕೆ ಬರುತ್ತಿಲ್ಲ’ ಎಂದು ಟ್ವೀಟ್ ಮಾಡಿ ಚರ್ಚೆಗೆ ತೆರೆ ಎಳೆದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT