ಎನ್‌ಕೌಂಟರ್‌: ಇಬ್ಬರು ಉಗ್ರರ ಹತ್ಯೆ

7

ಎನ್‌ಕೌಂಟರ್‌: ಇಬ್ಬರು ಉಗ್ರರ ಹತ್ಯೆ

Published:
Updated:

ಶ್ರೀನಗರ (ಪಿಟಿಐ): ಜಮ್ಮು ಮತ್ತು ಕಾಶ್ಮೀರದ ಕುಲ್ಗಾಮ್‌ ಜಿಲ್ಲೆಯಲ್ಲಿ ಭದ್ರತಾ ಪಡೆ ನಡೆಸಿದ ಕಾರ್ಯಾಚರಣೆಯಲ್ಲಿ ಇಬ್ಬರು ಉಗ್ರರು ಮೃತರಾಗಿದ್ದಾರೆ.  

ಅಲ್‌– ಬದರ್‌ ಉಗ್ರ ಸಂಘಟನೆ ಮುಖ್ಯಸ್ಥ ಜೀನತ್‌ ಉಲ್‌– ಇಸ್ಲಾಂ ಮತ್ತು ಶಾಕೀಲ್‌ ದಾರ್‌ ಮೃತರು. ದಕ್ಷಿಣ ಕಾಶ್ಮೀರದ ಕಟ್ಪೊರಾ ಪ್ರದೇಶದಲ್ಲಿ ಉಗ್ರರು ಇರುವ ಖಚಿತ ಮಾಹಿತಿ ಮೇರೆಗೆ ಭದ್ರತಾ ಪಡೆ ಕಾರ್ಯಾಚರಣೆ ನಡೆಸಿತು. 

ಉಗ್ರರಿಗೆ ಶರಣಾಗುವ ಅವಕಾಶ ನೀಡಿದರೂ, ಅವರು ದಾಳಿ ನಡೆಸಿದ ಕಾರಣ ಭದ್ರತಾ ಪಡೆ ಪ್ರತಿದಾಳಿ ನಡೆಸಿತು ಎಂದು ಅಧಿಕಾರಿಗಳು ತಿಳಿಸಿದರು. 

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !