ಶನಿವಾರ, ಸೆಪ್ಟೆಂಬರ್ 19, 2020
22 °C

ಅಲ್‌ಕೈದಾ ಉಗ್ರ ಮುಸಾ ಹತ್ಯೆ: ಕಾಶ್ಮೀರದಲ್ಲಿ ಕರ್ಫ್ಯೂ

ಪಿಟಿಐ Updated:

ಅಕ್ಷರ ಗಾತ್ರ : | |

ಶ್ರೀನಗರ: ಅಲ್‌ ಖೈದಾ ಸಂಘಟನೆಯೊಂದಿಗೆ ಸಂಪರ್ಕ ಹೊಂದಿದ್ದಾನೆ ಎನ್ನಲಾದ ಉಗ್ರ ಜಾಕೀರ್‌ ಮುಸಾ ಹತ್ಯೆಯಾಗಿದ್ದರಿಂದ ಗಲಭೆ ಉಂಟಾಗುವ ಸಾಧ್ಯತೆ ಇರುವುದರಿಂದ ಕಾಶ್ಮೀರದ ಹಲವು ಕಡೆಗಳಲ್ಲಿ ಶುಕ್ರವಾರ ಕರ್ಫ್ಯೂ ಜಾರಿಗೊಳಿಸಲಾಗಿದೆ.

ಶಾಲಾ–ಕಾಲೇಜುಗಳಿಗೆ ರಜೆ ಘೋಷಿಸಲಾಗಿತ್ತು. ಸಾಮಾಜಿಕ ಜಾಲತಾಣದ ಮೇಲೂ ನಿರ್ಬಂಧ ವಿಧಿಸಲಾಗಿದೆ. ಅನ್ಸರ್‌ ಘಜ್‌ವಾತ್ ಉಲ್‌ ಹಿಂದ್‌ (ಎಜಿಯುಹಿ) ಎಂಬ ಸಂಘಟನೆಯ ಮುಖಸ್ಥನಾಗಿದ್ದ ಮುಸಾನನ್ನು ತ್ರಾಲ್‌ನಲ್ಲಿ ನಡೆದ ಎನ್‌ಕೌಂಟರ್‌ನಲ್ಲಿ  ಗುರುವಾರ ಹತ್ಯೆ ಮಾಡಲಾಗಿದೆ.

ಈ ಕಾರ್ಯಾಚರಣೆಯಲ್ಲಿ ಇಬ್ಬರು ಉಗ್ರರು ಹತ್ಯೆಯಾಗಿದ್ದಾರೆ. ಅವರು ಯಾವ ಸಂಘಟನೆಗೆ ಸೇರಿದ್ದಾರೆ ಎಂಬ ಮಾಹಿತಿ ಲಭ್ಯವಾಗಿಲ್ಲ. ಮುಸಾ ಸಾವನ್ನಪ್ಪಿದ್ದಾನೆ ಎಂಬುದನ್ನು ಅವರು ಕುಟುಂಬ ಸಹ ಖಚಿತಪಡಿಸಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು