10ಕ್ಕೆ ಸರ್ವಪಕ್ಷಗಳ ಸಭೆ, ಡಿ. 11ರಿಂದ ಸಂಸತ್ ಚಳಿಗಾಲದ ಅಧಿವೇಶನ ಆರಂಭ

ನವದೆಹಲಿ: ಇದೇ 11ರಿಂದ ಸಂಸತ್ ಚಳಿಗಾಲದ ಅಧಿವೇಶನ ಆರಂಭವಾಗಲಿದ್ದು, ಉಭಯ ಸದನಗಳಲ್ಲಿಯೂ ಕಲಾಪ ಸುಗಮವಾಗಿ ನಡೆಯಬೇಕೆಂಬ ಉದ್ದೇಶದಿಂದ ಕೇಂದ್ರ ಸರ್ಕಾರ ಸೋಮವಾರ ಸರ್ವಪಕ್ಷಗಳ ಸಭೆ ಕರೆದಿದೆ.
ಲೋಕಸಭಾ ಚುನಾವಣೆಗೂ ಮುನ್ನ ನಡೆಯಲಿರುವ ಪೂರ್ಣಪ್ರಮಾಣದ ಕೊನೆಯ ಸಂಸತ್ ಅಧಿವೇಶನ ಇದಾಗಿದೆ. ಅಧಿವೇಶನ ಆರಂಭವಾಗುವ ಡಿ. 11ರಂದೇ ಪಂಚರಾಜ್ಯಗಳ ಚುನಾವಣಾ ಫಲಿತಾಂಶವೂ ಹೊರಬೀಳಲಿದೆ.
ರಾಜ್ಯಸಭೆಯಲ್ಲಿ ಬಾಕಿ ಉಳಿದಿರುವ ತ್ರಿವಳಿ ತಲಾಖ್ ಕುರಿತ ಮಸೂದೆಯನ್ನು ಮಂಡಿಸಲು ಸರ್ಕಾರ ಸಿದ್ಧತೆ ಮಾಡಿಕೊಳ್ಳುತ್ತಿದೆ. ತ್ರಿವಳಿ ತಲಾಖ್ ನೀಡುವುದು ಶಿಕ್ಷಾರ್ಹ ಅಪರಾಧ ಎಂಬ ಅಂಶವನ್ನು ಈ ಮಸೂದೆ ಒಳಗೊಂಡಿದೆ.
ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.