ಶನಿವಾರ, ಮೇ 30, 2020
27 °C

ಮದ್ಯ ಮಾರಾಟ: 10 ರಾಜ್ಯಗಳಿಗೆ ಮದ್ಯ ತಯಾರಿಕಾ ಕಂಪನಿಗಳ ಒಕ್ಕೂಟ ಮನವಿ

ಪಿಟಿಐ Updated:

ಅಕ್ಷರ ಗಾತ್ರ : | |

prajavani

ನವದೆಹಲಿ: ಮದ್ಯ ಮಾರಾಟಕ್ಕೆ ಅನುಮತಿ ನೀಡುವಂತೆ ಕೋರಿ ಮದ್ಯ ತಯಾರಿಕಾ ಕಂಪನಿಗಳ ಒಕ್ಕೂಟವು (ಸಿಐಎಬಿಸಿ) 10 ರಾಜ್ಯಗಳಿಗೆ ಮನವಿ ಮಾಡಿಕೊಂಡಿದೆ.

ಲಾಕ್‌ಡೌನ್‌ನಿಂದಾಗಿ ದೇಶದಾದ್ಯಂತ ಎಲ್ಲಾ ಸಗಟು ಮತ್ತು ರಿಟೇಲ್‌ ಮದ್ಯ ಮಾರಾಟ ಅಂಗಡಿಗಳ ಬಾಗಿಲು ಮುಚ್ಚಲಾಗಿದೆ. ಇದರಿಂದ ಅಕ್ರಮ ಮತ್ತು ನಕಲಿ ಮದ್ಯ ಮಾರಾಟ ಹೆಚ್ಚಾಗುತ್ತಿದೆ. ಹೀಗಾಗಿ ಮದ್ಯ ತಯಾರಿಕಾ ಕಂಪನಿಗಳು ವರಮಾನ ನಷ್ಟ ಎದುರಿಸುವಂತಾಗಿದೆ ಎಂದು ಒಕ್ಕೂಟವು ಆತಂಕ ವ್ಯಕ್ತಪಡಿಸಿದೆ. ಕರ್ನಾಟಕ, ದೆಹಲಿ, ಮಧ್ಯಪ್ರದೇಶ, ಹರಿಯಾಣ, ಮಹಾರಾಷ್ಟ್ರ, ಪಂಜಾಬ್‌, ರಾಜಸ್ಥಾನ, ತೆಲಂಗಾಣ, ಉತ್ತರ ಪ್ರದೇಶ ಮತ್ತು ಪಶ್ಚಿಮ ಬಂಗಾಳ ರಾಜ್ಯ ಸರ್ಕಾರಗಳಿಗೆ ಒಕ್ಕೂಟವು ಪತ್ರ ಬರೆದಿದೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು