ಸಾವರ್ಕರ್- ಗೋಡ್ಸೆ ನಡುವೆ ದೈಹಿಕ ಸಂಬಂಧ: ಕಾಂಗ್ರೆಸ್ ಹೇಳಿಕೆಗೆ ತೀವ್ರ ಟೀಕೆ

ನವದೆಹಲಿ: ಸಾವರ್ಕರ್ ಮತ್ತು ನಾಥೂರಾಮ್ ಗೋಡ್ಸೆ ನಡುವೆ ದೈಹಿಕ ಸಂಬಂಧವಿತ್ತು ಎಂದು ಮಧ್ಯಪ್ರದೇಶದ ಕಾಂಗ್ರೆಸ್ ಸಮಿತಿ ಪ್ರಕಟಿಸಿರುವ ಕೈಪಿಡಿಯಲ್ಲಿ ಉಲ್ಲೇಖಿಸಿರುವುದು ತೀವ್ರ ವಿವಾದಕ್ಕೆ ಕಾರಣವಾಗಿದೆ.
‘ಹೌ ಬ್ರೇವ್ ವಾಸ್ ವೀರ್ ಸಾವರ್ಕರ್’ ಪುಸ್ತಕವನ್ನು ಭೋಪಾಲ್‌ನ ಕಾಂಗ್ರೆಸ್ ಸಮಿತಿ ವತಿಯಿಂದ ಆಯೋಜಿಸಲಾಗಿದ್ದ ಅಖಿಲ ಭಾರತ ಕಾಂಗ್ರೆಸ್ ಸೇವಾದಳ ತರಬೇತಿ ಶಿಬಿರದಲ್ಲಿ ಹಂಚಲಾಗಿತ್ತು.
‘ಇದೊಂದು ಅಸಹ್ಯಕರ ಹೇಳಿಕೆ. ಕಾಂಗ್ರೆಸ್, ಗಾಂಧಿ ಮತ್ತು ನೆಹರು ಕುಟುಂಬದವರ ಹೊರತಾಗಿ ಉಳಿದ ನಾಯಕರನ್ನು ಕೆಣಕುವ ಕೆಲಸ ಮಾಡುತ್ತಿದೆ’ ಎಂದು ಬಿಜೆಪಿ ಕಿಡಿಕಾರಿದೆ. ‘ಕಾಂಗ್ರೆಸ್ ನಾಯಕರ ವಿವಿಧ ಸಂಬಂಧಗಳು ಪ್ರಪಂಚಕ್ಕೆ ತಿಳಿದಿದೆ. ಆದರೆ, ನಮಗೆ ಕೆಸರೆರಚಲು ಇಷ್ಟವಿಲ್ಲ’ ಎಂದು ಬಿಜೆಪಿ ಪ್ರಧಾನ ಕಾರ್ಯದರ್ಶಿ ಅನಿಲ್ ಜೈನ್ ತಿಳಿಸಿದ್ದಾರೆ.
ಸಾವರ್ಕರ್ ಮೊಮ್ಮಗ ಗರಂ
ಸಾವರ್ಕರ್ ವಿರುದ್ಧ ಮಾನಹಾನಿಕರ ಹೇಳಿಕೆ ನೀಡಿರುವುದನ್ನು ಖಂಡಿಸಿರುವ, ಅವರ ಮೊಮ್ಮಗ ರಂಜಿತ್ ಸಾವರ್ಕರ್ ಕಾಂಗ್ರೆಸ್ ಮತ್ತು ಅದರ ನಾಯಕ ರಾಹುಲ್ ಗಾಂಧಿ ಅವರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಬೇಕು ಎಂದು ಮುಖ್ಯಮಂತ್ರಿ ಉದ್ಧವ್ ಠಾಕ್ರೆ ನೇತೃತ್ವದ ಸರ್ಕಾರವನ್ನು ಒತ್ತಾಯಿಸಿದ್ದಾರೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.