ಸ್ವಘೋಷಿತ ದೇವ ಮಾನವ ಗುರ್ಮೀತ್‌ ರಾಮ್‌ ರಹೀಮ್‌ಗೆ ಜೀವಾವಧಿ ಶಿಕ್ಷೆ

7

ಸ್ವಘೋಷಿತ ದೇವ ಮಾನವ ಗುರ್ಮೀತ್‌ ರಾಮ್‌ ರಹೀಮ್‌ಗೆ ಜೀವಾವಧಿ ಶಿಕ್ಷೆ

Published:
Updated:

ಪಂಚಕುಲಾ: ಪತ್ರಕರ್ತನ ಹತ್ಯೆ ಪ್ರಕರಣದಲ್ಲಿ ಡೇರಾ ಸಚ್ಚಾ ಸೌಧಾದ ಮಾಜಿ ಮುಖ್ಯಸ್ಥ, ಸ್ವಯಂ ಘೋಷಿತ ದೇವಮಾನವ ಗುರ್ಮೀತ್‌ ರಾಮ್‌ ರಹೀಮ್‌ ಸಿಂಗ್‌(51) ಸೇರಿದಂತೆ ನಾಲ್ವರು ಆರೋಪಿಗಳಿಗೆ ಸಿಬಿಐ ವಿಶೇಷ ನ್ಯಾಯಾಲಯವು ಜೀವಾವಧಿ ಶಿಕ್ಷೆ ಪ್ರಕಟಿಸಿದೆ. 

2002ರಲ್ಲಿ ಪತ್ರಕರ್ತ ರಾಮ್‌ ಚಂದರ್‌ ಛತ್ರಪತಿ ಹತ್ಯೆಯಾಗಿತ್ತು. ಈ ಹತ್ಯೆ ಸಂಬಂಧ ಎಲ್ಲ ನಾಲ್ವರು ಆರೋಪಿಗಳನ್ನು ತಪ್ಪಿತಸ್ಥರು ಎಂದು ಕಳೆದ ಶುಕ್ರವಾರ ಕೋರ್ಟ್‌ ತೀರ್ಪು ನೀಡಿತ್ತು. ಗುರುವಾರ ಸಂಜೆ ಶಿಕ್ಷೆ ಪ್ರಮಾಣ ಪ್ರಕಟಿಸಿದೆ. 

ಪ್ರಸ್ತುತ ಜೈಲು ಶಿಕ್ಷೆ ಅನುಭವಿಸುತ್ತಿರುವ ಗುರ್ಮೀತ್‌ ವಿಚಾರಣೆಯನ್ನು ವಿಡಿಯೊ ಕಾನ್ಫರೆನ್ಸ್‌ ಮೂಲಕ ನಡೆಸಲಾಗಿದೆ.

ಇಬ್ಬರು ಮಹಿಳಾ ಅನುಯಾಯಿಗಳ ಮೇಲೆ ಅತ್ಯಾಚಾರ ನಡೆಸಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಗುರ್ಮೀತ್‌ ರಮ್‌ ರಹೀಂ ಸಿಂಗ್‌ 20 ವರ್ಷ ಜೈಲು ಶಿಕ್ಷೆಗೆ ಗುರಿಯಾಗಿದ್ದು, ರೋಹ್ಟಕ್‌ನ ಸುನರಿಯಾ ಜೈಲುವಾಸದಲ್ಲಿದ್ದಾನೆ. ಪತ್ರಕರ್ತನ ಹತ್ಯೆ ಪ್ರಕರಣದ ಇತರೆ ಅಪರಾಧಿಗಳಾದ ಕುಲ್‌ದೀಪ್‌ ಸಿಂಗ್‌, ನಿರ್ಮಲಾ ಸಿಂಗ್‌ ಹಾಗೂ ಕೃಷನ್ ಲಾಲ್‌ ಪ್ರಸ್ತುತ ಅಂಬಾಲಾ ಜೈಲಿನಲ್ಲಿದ್ದಾರೆ. 

ಪಂಚಕುಲದಲ್ಲಿ ಅಹಿತಕರ ಘಟನೆ ನಡೆಯದಂತೆ ಸ್ಥಳೀಯ ಆಡಳಿತ ಮುನ್ನೆಚ್ಚರಿಕೆ ಕ್ರಮವಾಗಿ ಹೆಚ್ಚಿನ ಭದ್ರತಾ ವ್ಯವಸ್ಥೆ ಕಲ್ಪಿಸಿತ್ತು.

 

ಬರಹ ಇಷ್ಟವಾಯಿತೆ?

 • 6

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !